NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸಾರಿಗೆ ನೌಕರರ ವೇತನ ಹಿಂಬಾಕಿ ಸಂಬಂಧ ಇಂದು ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರಿಗೆ 2020ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆಯ ಹಿಂಬಾಕಿ ಸಂಬಂಧ ಇಂದು (ಆ.10) ನೌಕರರ ವಿವಿಧ ಸಂಘಟನೆಗಳ ಮುಖಂಡರ ಸಭೆಯನ್ನು ಕರೆಯಲಾಗಿದೆ.

ಈ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ನೌಕರರಿಗೆ ಬರಬೇಕಿರುವ ಈ ಹಿಂಬಾಕಿ ಕುರಿತು ಚರ್ಚಸಲು ಒನ್‌ ಮ್ಯಾನ್‌ ಕಮಿಟಿ ಅಧ್ಯಕ್ಷ ನಿವೃತ್ತ ಐಎಎಸ್‌ಅಧಿಕಾರಿ ಎಂ.ಆರ್‌.ಶ್ರೀನಿವಾಸ್‌ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹೀಗಾಗಿ ಇಂದು ಮಧ್ಯಾಹ್ನ 2.30ಕ್ಕೆ ಸಂಘಟನೆಗಳ ಪದಾಧಿಕಾರಿಗಳು ಬೆಂಗಳೂರಿನ ಶಾಂತಿನಗರದಲ್ಲಿರುವ ಕೇಂದ್ರ ಕಚೇರಿಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಇನ್ನು 2020ರ ಜನವರಿ 1ರಿಂದಲೇ ಹಿಂಬಾಕಿ ( Arrears) ಕೊಡುವ ಸಂಬಂಧ ಮಾರ್ಚ್‌ನಿಂದ ಈವರೆಗೂ ಯಾವುದೇ ತೀರ್ಮಾನವಾಗಿಲ್ಲ. ಕಾರಣ ಈ ಸಂಬಂಧ ಸಾರಿಗೆ ಅಧಿಕಾರಿಗಳು, ಸರ್ಕಾರದ ಅಧಿಕಾರಿಗಳು, ನೌಕರರ ಸಂಘಟನೆಗಳು ಹಾಗೂ ನ್ಯಾಯಾಲಯದ ಅಧಿಕಾರಿಗಳು ಒನ್‌ ಮ್ಯಾನ್‌ ಕಮಿಟಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿ ಅದರಲ್ಲಿ ತೀರ್ಮಾನ ತೆಗೆದುಕೊಂಡ ಬಳಿಕ ಹಿಂಬಾಕಿಯ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗುವುದು.

ಹೀಗಾಗಿ ಇಂದು ಸಾರಿಗೆ ನೌಕರರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಹಿಂಬಾಕಿಯನ್ನು ಯಾವ ತಿಂಗಳಿನಿಂದ ಕೊಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಒನ್‌ ಮ್ಯಾನ್‌ ಕಮಿಟಿ ಅಧ್ಯಕ್ಷರು ಸಭೆಯಲ್ಲಿ ನಡೆದ ಚರ್ಚೆಯ ವರದಿಯನ್ನು ಸಿಎಂ ಮತ್ತು ಸಾರಿಗೆ ಸಚಿವರಿಗೆ ಸಲ್ಲಿಸಲಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ