NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 1.25ಲಕ್ಷ ನೌಕರರ 16 ತಿಂಗಳುಗಳ ತುಟ್ಟಿಭತ್ಯೆ ಬಾಕಿ ಉಳಿಸಿಕೊಂಡ ಸಾರಿಗೆ ನಿಗಮಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ ಜುಲೈ 2022ರಿಂದ ಜುಲೈ 2023ರವರೆಗೆ ಒಟ್ಟು 16 ತಿಂಗಳ ತುಟ್ಟಿ ಭತ್ಯೆ (DA) ಹಿಂಬಾಕಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಡಿಎ ಹೆಚ್ಚಳ ಮಾಡಿದ ಬಳಿಕ ರಾಜ್ಯ ಸರ್ಕಾರವೂ ಕೂಡ ತನ್ನ ನೌಕರರಿಗೆ ಡಿಎ ಹೆಚ್ಚಳ ಮಾಡುತ್ತದೆ. ಅದೇ ರೀತಿ ಕಳೆದ 2022ರ ಜುಲೈನಲ್ಲಿ ಕೇಂದ್ರ ಸರ್ಕಾರ ಶೇ.4ರಷ್ಟು ಡಿಎ ಹೆಚ್ಚಳ ಮಾಡಿತ್ತು. ಬಳಿಕ ರಾಜ್ಯ ಸರ್ಕಾರ ಕೂಡ 2022ರ ಅಕ್ಟೋಬರ್‌ 7ರಂದು ಶೇ.3.75ರಷ್ಟು ಡಿಎ ಹೆಚ್ಚಳ ಮಾಡಿ ಅದು ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು.

ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಎಷ್ಟು ಹೆಚ್ಚಳವಾಗುತ್ತದೆಯೋ ಯಥಾಪ್ರಕಾರದಲ್ಲೇ ಸಾರಿಗೆ ನೌಕರರಿಗೂ ಡಿಎ ಅಷ್ಟೇ ಹೆಚ್ಚಳವಾಗುತ್ತದೆ. ಈ ಡಿಎ ಹೆಚ್ಚಳವನ್ನು ಸಾರಿಗೆ ನಿಗಮಗಳು ತಮ್ಮ ನೌಕರರಿಗೆ ಡಿಸೆಂಬರ್‌-2022ರ ವೇತನದಲ್ಲಿ ಸೇರಿಸಿದ್ದು, ಉಳಿದ 5 ತಿಂಗಳ ಡಿಎ ಹಿಂಬಾಕಿನ್ನು ಈವರೆಗೂ ನೀಡಿಲ್ಲ.

ಅದೇ ರೀತಿ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ತುಟ್ಟಿಭತ್ಯೆ ಹೆಚ್ಚಳವನ್ನು ಆಗಸ್ಟ್‌ ವೇತನದಲ್ಲಿ ಸಾರಿಗೆ ನೌಕರರಿಗೆ ಸೇರಿಸಲಾಗಿದ್ದು, ಇದರ 7 ತಿಂಗಳ ಹಿಂಬಾಕಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ.

ಇನ್ನು ಇತ್ತೀಚೆಗೆ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ಸಾರಿಗೆ ನೌಕರರಿಗೆ ಇದೇ ನವೆಂಬರ್‌ 2023ರ ವೇತನದಲ್ಲಿ ಸೇರಿಸಿ ಕೊಡುವಂತೆ ಸಾರಿಗೆಯ ನಾಲ್ಕೂ ಸಂಸ್ಥೆಗಳಿಗೂ ಕೆಎಸ್‌ಆರ್‌ಟಿಸಿ  ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ನಡುವೆ ಈ ಡಿಎ ಹಿಂಬಾಕಿ ಕೊಡುವುದಕ್ಕೆ ಆಯಾಯ ನಿಗಮಗಳ ಆರ್ಥಿಕ ಪರಿಸ್ಥಿತಿಯ ಮೇಲೆ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಹೀಗಾಗಿ ಸಾರಿಗೆ ನೌಕರರಿಗೆ 2022ರ ಜುಲೈ ತುಟ್ಟಿಭತ್ಯೆಯ ಶೇ.3.75ರಷ್ಟು ಹೆಚ್ಚಳದ 5 ತಿಂಗಳುಗಳು, 2023ರ ಜನವರಿ ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಳದ 7 ತಿಂಗಳುಗಳು ಮತ್ತು 2023ರ ಜುಲೈ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳದ 4 ತಿಂಗಳುಗಳ ತುಟ್ಟಿಭತ್ಯೆ ಹಿಂಬಾಕಿಯನ್ನು ಅಂದರೆ ಒಟ್ಟು 16 ತಿಂಗಳುಗಳ ಹಿಂಬಾಕಿಯನ್ನು ಸಾರಿಗೆ ನೌಕರರಿಗೆ ಬಿಡುಗಡೆ ಮಾಡಬೇಕಿದೆ.

ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ನಮ್ಮ ನಿಗಮಗಳು ಲಾಸ್‌ನಲ್ಲಿ ನಡೆಯುತ್ತಿವೆ ಜತೆಗೆ ಪ್ರಸ್ತುತ ಶಕ್ತಿ ಯೋಜನೆಯ ಟಿಕೆಟ್‌ ಮೌಲ್ಯದ ಹಣವನ್ನು ಸರ್ಕಾರ ಸರಿಯಾಗಿ ಬಿಡುಗೆ ಮಾಡದೆ ಕಡಿಮೆ ಹಣ ಬಿಡುಗಡೆ ಮಾಡುತ್ತಿರುವುದರಿಂದ ನೌಕರರಿಗೆ ಡಿಎ ಸೇರಿದಂತೆ ಇತರೆ ಭತ್ಯೆಗಳನ್ನು ಕೊಡುವುದಕ್ಕೆ ಸಮಸ್ಯೆ ಆಗುತ್ತಿದೆ ಎಂದು ಹೇಳುತ್ತಿದ್ದಾರೆ.

ಇನ್ನು ಸಾರಿಗೆ ನೌಕರರಿಗೆ ಬರಬೇಕಿರುವ 16 ತಿಂಗಳ ತುಟ್ಟಿಭತ್ಯೆ ಹಿಂಬಾಕಿಯನ್ನು ಕೂಡಲೇ ಸಂಬಂಧಪಟ್ಟ ಆರ್ಥಿಕ ಇಲಾಖೆ ಆಧಿಕಾರಿಗಳು ಬಿಡುಗಡೆ ಮಾಡುವುದಕ್ಕೆ ಸರ್ಕಾರ ಮತ್ತು ಸಾರಿಗೆ ಸಚಿವರು ಆದೇಶ ಹೊರಡಿಸಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು