NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಶಕ್ತಿ ಯೋಜನೆಗೆ ನಾಳೆಗೆ ವರ್ಷ- ನಾಡಿನ ಮಹಿಳೆಯರಿಗೆ, ಸರ್ಕಾರಕ್ಕೂ ಹರ್ಷ- ಬೃಹತ್‌ ಕಾರ್ಯಕ್ರಮಕ್ಕೂ ಸಿದ್ಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಆರಂಭವಾಗಿ ನಾಳೆಗೆ, ಅಂದರೆ ಜೂನ್‌ 12ರ ಬುಧವಾರಕ್ಕೆ ಒಂದು ವರ್ಷ ತುಂಬಿ 2ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿದೆ.

ಈ ಒಂದುವರ್ಷದ ಅವಧಿಯಲ್ಲಿ ಸರಿ ಸುಮಾರು 225 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರಿಂದ ನಾಲ್ಕೂ ನಿಗಮಗಳಿಗೂ ಬರೋಬ್ಬರಿ 5,481 ಕೋಟಿ ರೂಪಾಯಿ ಆದಾಯ ಬಂದಿದೆ.

ಕೆಎಸ್ಆರ್​ಟಿಸಿ ಒಂದರಲ್ಲೇ 68 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದರೆ, ಬಿಎಂಟಿಸಿಯಲ್ಲಿ 71 ಕೋಟಿ, ಕೆಕೆಆರ್​ಟಿಸಿ – ಎನ್​ಡಬ್ಲ್ಯುಕೆಆರ್​ಟಿಸಿಯಲ್ಲಿ 85 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದ ನಾಲ್ಕು ನಿಗಮಗಳಿಗೆ ಕೋಟ್ಯಂತರ ರೂಪಾಯಿ ಆದಾಯ ಬಂದಿದ್ದು, ಆರ್ಥಿಕವಾಗಿ ನಷ್ಟದಲ್ಲಿದ್ದ ನಿಗಮಗಳಿಗೆ ಶಕ್ತಿ ಯೋಜನೆಯಿಂದ ದೊಡ್ಡ ಮಟ್ಟದ ಲಾಭವಾಗಿ ಪ್ರಸ್ತುತ ಆನೆ ಬಲ ಬಂದಿದೆ.

ಕೆಎಸ್ಆರ್​​​ಟಿಸಿಗೆ 2070 ಕೋಟಿ ರೂಪಾಯಿ ಆದಾಯ ಬಂದಿದ್ದರೆ, ಬಿಎಂಟಿಸಿಗೆ 937 ಕೋಟಿ ರೂಪಾಯಿ, ಕೆಕೆಆರ್​ಟಿಸಿ- ಎನ್​ಡಬ್ಲ್ಯುಕೆಆರ್​ಟಿಸಿಗೆ ಸೇರಿ ಒಟ್ಟು 2472 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಶಕ್ತಿ ಯೋಜನೆ ಆರಂಭದಿಂದ ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕೆಲಸಕ್ಕೆ ಹೋಗುವ ಮಹಿಳೆಯರಿಗೆ ದೊಡ್ಡ ‌ಮಟ್ಟದಲ್ಲಿ ಸಹಾಯ ಆಗಿದ್ದರೆ, ಇತ್ತ ರಾಜ್ಯದ ಧಾರ್ಮಿಕ ಕ್ಷೇತ್ರ, ಪ್ರವಾಸಿ ತಾಣಗಳು ಸೇರಿ ಇತರೆಡೆಗೆ ಪ್ರತಿದಿನವೂ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಶಕ್ತಿ ಯೋಜನೆಯಿಂದಾಗಿ ಸಾವಿರಾರು ರೂಪಾಯಿ ಉಳಿತಾಯ ಆಯ್ತು. ಇದೇ ರೀತಿ ಇನ್ನಷ್ಟು ವರ್ಷ ಮುಂದುವರಿಯಲಿ ಎಂದು ಮಹಿಳೆಯರು, ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.

ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಜತೆಗೆ ರಾಜ್ಯದ ಮಹಿಳೆಯಿರಿಗೆ ಇನ್ನಷ್ಟು ಉತ್ಸಾಹ ತುಂಬುವುದಕ್ಕಾಗಿಯೇ ಈ ವಾರ ಅಥವಾ ಮುಂದಿನ ವಾರ ರಾಜ್ಯ ಸರ್ಕಾರ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಶಕ್ತಿ ಯೋಜನೆಯ ವರ್ಷಾಚರಣೆಯನ್ನು ಸಂಭ್ರಮಿಸಲು ಚಿಂತನೆ ನಡೆಸಿದ್ದು, ಸಮಾರಂಭ ದಿನಾಂಕ ಘೋಷಣೆ ಮಾಡಲು ಮುಂದಾಗಿದೆ.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ