NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಗಣೇಶ ಹಬ್ಬಕ್ಕೆ 1500 ಹೆಚ್ಚು ಬಸ್‌ಗಳ ಓಡಾಟ- ಓಟಿ, ರಜೆಯಲ್ಲಿ ಡ್ಯೂಟಿ ಮಾಡುವ ಚಾಲನಾ ಸಿಬ್ಬಂದಿಗೆ ಡಬಲ್‌ ವೇತನ ಕೊಡಲು ಒತ್ತಾಯ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಸೆ.6ರಂದು ಸ್ವರ್ಣಗೌರಿವ್ರತ ಮತ್ತು ಸೆ.7ರಂದು ಗಣೇಶ ಹಬ್ಬ ವಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲು ಸಿದ್ಧತೆ ನಡೆಸಿದೆ.

ಬೆಂಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ ಸ್ಥಳಗಳಿಗೆ ಹೆಚ್ಚವರಿಯಾಗಿ 1,500 ವಿಶೇಷ ಬಸ್‌ಗಳನ್ನು ಜನರ ಸೇವೆಗೆ ಬಿಡಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಎಲ್ಲಿಗೆಲ್ಲ ವಿಶೇಷ ಬಸ್? KSRTC ವಿಶೇಷ ಬಸ್​​ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಲವು ಪ್ರಮುಖ ಸ್ಥಳಗಳಿಗೆ ಸಂಚರಿಸಲಿವೆ. ತಿರುಪತಿ, ವಿಜಯವಾಡ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮತ್ತು ಹೈದರಾಬಾದ್ ಸೇರಿದಂತೆ ಇತರೆ ಕಡೆಗಳಿಗೆ ಈ ವಿಶೇಷ ಬಸ್​​ಗಳು ಸಂಚರಿಸಲಿದೆ.

ಇನ್ನು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕೂಡ ವಿಶೇಷ ಬಸ್‌ಗಳ ಸೌಲಭ್ಯವಿರಲಿದ್ದು ಪಿರಿಯಾಪಟ್ಟಣ, ವಿರಾಜಪೇಟೆ, ಮೈಸೂರು, ಹುಣಸೂರು, ಕುಶಾಲನಗರ ಮತ್ತು ಮಡಿಕೇರಿ ಸೇರಿದಂತೆ ಪ್ರಮುಖ ಸ್ಥಳಗಳಿಗೆ ತೆರಳಲಿವೆ ಎಂದು ಕೆಎಸ್ಆರ್​​ಟಿಸಿ ತಿಳಿಸಿದೆ.

ವಿಶೇಷ ಬಸ್​​ಗಳ ಟಿಕೆಟ್ ಬುಕಿಂಗ್? ವಿಶೇಷ ಹಾಗೂ ಹೆಚ್ಚುವರಿ ಬಸ್​ಗಳ ಪ್ರಯಾಣದ ಸಮಯ ಹಾಗೂ ದರದ ಬಗ್ಗೆ ಕೆಎಸ್‌ಆರ್‌ಟಿಸಿ ಮೊಬೈಲ್​ ಆ್ಯಪ್​ ಹಾಗೂ https://www.ksrtc.in/ ವೆಬ್​ಸೈಟ್​​ ಮೂಲಕ ಸಂಸ್ಥೆ ಮಾಹಿತಿ ನೀಡಲಿದೆ. ಇವುಗಳ ಮೂಲಕವೇ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಕರ್ನಾಟಕದಾದ್ಯಂತ ಬಸ್​​ ನಿಲ್ದಾಣಗಳಲ್ಲಿನ ಹಾಗೂ ನೆರೆ ರಾಜ್ಯಗಳ ಕೆಎಸ್‌ಆರ್‌ಟಿಸಿ ಕೌಂಟರ್​ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಒಬ್ಬ ವ್ಯಕ್ತಿಯು ಒಂದು ಬುಕಿಂಗ್​ಗೆ 4 ಅಥವಾ 5 ಮಂದಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ.5ರ ರಿಯಾಯಿತಿ ನೀಡುವುದಾಗಿಯೂ ಕೆಎಸ್‌ಆರ್‌ಟಿಸಿ ಘೋಷಿಸಿದೆ. ರಿಟರ್ನ್ ಟಿಕೆಟ್ ಕೂಡ ಒಟ್ಟಿಗೇ ಕಾಯ್ದಿರಿಸಿದರೆ ಶೇ.10ರ ರಿಯಾಯಿತಿ ದೊರೆಯಲಿದೆ ಎಂಧು ತಿಳಿಸಿದೆ.

ಡಬಲ್‌ ವೇತನಕ್ಕೆ ಒತ್ತಾಯ: ಇನ್ನು 1500 ವಿಶೇಷ ಬಸ್‌ಗಳನ್ನು ಹೆಚ್ಚುವರಿಯಾಗಿ ಓಡಿಸುವುದಾಗಿ ಸಂಸ್ಥೆ ತಿಳಿಸಿದೆ. ಆದರೆ, ಈ ಹೆಚ್ಚುವರಿ ಬಸ್‌ ಓಡಿಸುವುದಕ್ಕೆ ಚಾಲನಾ ಸಿಬ್ಬಂದಿಗಳ ಅಗತ್ಯವಿದೆ. ಅಂದರೆ ನೌಕರರು ರಜೆ ತೆಗೆದುಕೊಳ್ಳದೆ ಜತೆಗೆ ಓಟಿ ಮಾಡುಬೇಕಾಗುತ್ತದೆ. ಈ ರೀತಿ ರಜೆ ಪಡೆಯದೆ ಮತ್ತು ಸಾಮಾನ್ಯ ಡ್ಯೂಟಿ ಬಳಿಕ ಓಟಿ ಮಾಡುವ ನೌಕರರಿಗೆ ಅವರ ಶ್ರಮಕ್ಕೆ ತಕ್ಕ ಓಟಿ ಹಣ ಮತ್ತು ರಜೆ ತೆಗೆದುಕೊಳ್ಳದೆ ಡ್ಯೂಟಿ ಮಾಡಿದ್ದಕ್ಕೆ ಡಬಲ್‌ ವೇತನವನ್ನು ಕೊಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಸಂಸ್ಥೆಯ ಯಾವುದೇ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ. ಹೀಗಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರು ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಡಿಎಂಗಳಿಗೆ ವೇತನದ ಡಬಲ್‌ ಓಟಿ ಮತ್ತು ರಜೆಯಲ್ಲಿ ಕೆಲಸ ಮಾಡುವವರಿಗೆ ಡಬಲ್‌ ವೇತನ ಕೊಡಬೇಕು ಎಂದು ಸೂಚನೆ ನೀಡುವಂತೆ ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ