NEWSನಮ್ಮಜಿಲ್ಲೆನಮ್ಮರಾಜ್ಯ

KSRTC- 2020ರ ವೇತನ ಹೆಚ್ಚಳದ 38 ತಿಂಗಳುಗಳ ಅರಿಯರ್ಸ್‌ ಶೀಘ್ರ ಬಿಡುಗಡೆ: ಮತ್ತೊಮ್ಮೆ ಭರವಸೆ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ ಬರಬೇಕಿರುವ 2020 ಜನವರಿ 1ರಿಂದ ಹೆಚ್ಚಳವಾಗಿರುವ ವೇತನ ಹಿಂಬಾಕಿಯನ್ನು ಅತೀ ಶೀಘ್ರದಲ್ಲೇ ಕೊಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತೊಮ್ಮೆ ಭರವಸೆ ನೀಡಿದ್ದಾರೆ.

ಗುರುವಾರ ಸಾರಿಗೆ ನೌಕರರ ಜಂಟಿ ಸಮಿತಿ ಪದಾಧಿಕಾರಿಗಳು ಶಾಂತಿನಗರದಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಲ್ಲಿ ಭೇಟಿ ಮಾಡಿದ ವೇಳೆ ಮಾತನಾಡಿದ ಅವರು, ನಿಮ್ಮ ಬೇಡಿಕೆಗಳು ನಮ್ಮ ಗಮನದಲ್ಲಿವೆ ನಾವು ಕೂಡ ಅದೇ ನಿಟ್ಟಿನಲ್ಲಿ ಯೋಚನೆ ಮಾಡುತ್ತಿದ್ದೇವೆ, ಅತೀ ಶೀಘ್ರದಲ್ಲೇ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಕೊಡುತ್ತೇವೆ ಎಂದು ಹೇಳಿದ್ದಾರೆ.

ಇತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕೂಡ ಸರ್ಕಾರ ಹಣ ನೀಡಿದರೆ ಅರಿಯರ್ಸ್ ನೀಡುತ್ತೇ‌ವೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಹಣ ಬಂದ ನಂತರ ಅರಿಯರ್ಸ್ ತೀರ್ಮಾನ ಮಾಡೋಣ ಎಂದು ಸಚಿವರು ಹೇಳಿದ್ದಾರೆ ಎಂದು ಕೂಡ ತಿಳಿದು ಬಂದಿದೆ.

ಸಚಿವ ರಾಮಲಿಂಗಾರೆಡ್ಡಿ ಅವರು 1.1.2020ರ ವೇತನ ಅರಿಯರ್ಸ್ ನಿವೃತ್ತ ನೌಕರರಿಗೂ ಸಹ ಪರಿಷ್ಕರಣೆ ಮಾಡಲು ಒಪ್ಪಿದ್ದು ತ್ವರಿತವಾಗಿ ಆದೇಶವನ್ನು ಹೊರಡಿಸಲಾಗುವುದೆಂದು ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಇಲ್ಲಿ ಹಾಲಿ ಸೇವೆಯಲ್ಲಿರುವ ನೌಕರರು ಮತ್ತು ನಿವೃತ್ತ ನೌಕರರು ಎಂದು ಹೇಳಲು ಬರುವುದಿಲ್ಲ.

2020ರ ಜನವರಿ 1ರಿಂದ ಶೇ.15ರಷ್ಟು ವೇತನ ಹೆಚ್ಚಳವಾಗಿದ್ದು ಅಂದಿನಿಂದಲೇ ಈ ವೇತನ ಹೆಚ್ಚಳದ ಹಿಂಬಾಕಿಯನ್ನು ಕೊಡಬೇಕು, ಈ ನಡುವೆ ನಿವೃತ್ತರಾದ ನೌಕರರು ಮತ್ತು ಅಧಿಕಾರಿಗಳಿಗೂ ಅವರು ನಿವೃತ್ತಿ ಹೊಂದಿದ ಹಿಂದಿನ ದಿನದವರೆಗೂ ಅದು ಜಮೆಯಾಗಬೇಕು. ಇದು ನಿಯಮವೂ ಹೌದು. ಆದರೆ, ಇಲ್ಲಿ ನಿವೃತ್ತರು ಮತ್ತು ಹಾಲಿ ಸೇವೆಯಲ್ಲಿರುವವರು ಎಂದು ಏಕೆ ಹೇಳಲಾಗುತ್ತಿದೆ?

ಇನ್ನು ಈ 2020ರ ವೇತನ ಹೆಚ್ಚಳದ ಶೇ.15ರಷ್ಟು ಅರಿಯರ್ಸ್‌ ಕೊಡದೆ ಮತ್ತೆ 2024ರ ವೇತನ ಹೆಚ್ಚಳಕ್ಕೆ ಮುಂದಾದರೆ ನಾವು ಬಿಡುವುದಿಲ್ಲ ಎಂದು ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಹೇಳುತ್ತಿದ್ದಾರೆ. ಇದರ ಜತೆಗೆ ವೇತನ ಹೆಚ್ಚಳದ ಸೌಲಭ್ಯವನ್ನು ಈವರೆಗೂ ಪಡೆಯದ 2020 ಜನವರಿ 1ರಿಂದ 2023 ಫೆಬ್ರವರಿ 28ರ ನಡುವೆ ನಿವೃತ್ತರಾದ ನೌಕರರು ಮತ್ತು ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗುವುದಕ್ಕೆ ತೆರೆ ಮರೆಯಲ್ಲಿ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಒಟ್ಟಾರೆ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಮಾಡಿದ ಎಡವಟ್ಟಿನಿಂದ ಇಂದಿನ ಕಾಂಗ್ರೆಸ್‌ ಸರ್ಕಾರ ಕೂಡ ಸಾರಿಗೆ ಅಧಿಕಾರಿಗಳು ಮತ್ತು ನೌಕರರಿಗೆ ಕಾಲ ಕಾಲಕ್ಕೆ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಹಿಂದೆ ಬೀಳುತ್ತಿದ್ದು, ಇದು ಸಾರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಸಾರಿಗೆ ನಿಗಮಗಳಲ್ಲಿ ಬಹುತೇಕ ಅಧಿಕಾರಿಗಳು ತಮ್ಮದೇ ನೌಕರರಿಂದ ಲಂಚ ಪಡೆದೇ ಐಶಾರಾಮಿ ಜೀವನ ಸಾಗಿಸುತ್ತಿದ್ದಾರೆ. ಅವರಿಗೆ ವೇತನ ಹೆಚ್ಚಳದ ಅಗತ್ಯತೆ ಇಲ್ಲ. ಆದರೆ, ಇಂಥ ಭ್ರಷ್ಟ ಅಧಿಕಾರಿಗಳಿಗೂ ತಾವು ದುಡಿದ ಹಣದಲ್ಲೇ ಲಂಚ ಕೊಟ್ಟು ಇತ್ತ ಸಂಸಾರದ ನೊಗವನ್ನು ಎಳೆಯುತ್ತಿರುವ ನೌಕರರಿಗೆ ಈ ವೇತನ ಹೆಚ್ಚಳದ ಅರಿಯರ್ಸ್‌ ಅಗತ್ಯವಾಗಿ ಬೇಕಿದೆ ಎಂದು ಸಂಸ್ಥೆಯ ಪ್ರಾಮಾಣಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರಿಗೆಯ ಬಹುತೇಕ ಅಧಿಕಾರಿಗಳು ಏಕೆ ಹೋರಾಟಕ್ಕೆ ಮುಂದಾಗುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ ಆ ಪ್ರಾಮಾಣಿಕ ಅಧಿಕಾರಿ ಕೆಲ ಭ್ರಷ್ಟರಿಗೆ ವೇತನ ಹೆಚ್ಚಳದ ಲಾಭಕ್ಕಿಂತ ಲಂಚದಿಂದಲೇ ಕೋಟಿ ಕೋಟಿ ಹಣ ಸಂಗ್ರಹಿವಾಗುತ್ತದೆ. ಅದರಿಂದ ಅದ್ದೂರಿ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಎಷ್ಟೇ ವೇತನ ಹೆಚ್ಚಾದರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಸಾರಿಗೆ ನಿಗಮಗಳಲ್ಲಿ ಒಬ್ಬ ಟಿಐಯಿಂದ ಡಿಸಿವರೆಗೆ ಅವರ ಬ್ಯಾಂಕ್‌ ಖಾತೆಗಳು ಮತ್ತು ಇತರೆ ಜಾಲಗಳನ್ನು ಶೋಧಿಸಿದರೆ ಆಗ ಬಹುತೇಕ ಭ್ರಷ್ಟ ಅಧಿಕಾರಿಗಳ ಮುಖವಾಡ ಕಳಚಿ ಬೀಳುತ್ತದೆ. ಆದರೆ, ಆ ಕೆಲಸವನ್ನು ಮಾಡುವವರು ಯಾರು ಎಂದು ಕೇಳುತ್ತಿದ್ದಾರೆ ಈ ಅಧಿಕಾರಿ.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ