NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಗ್ಗೆ ಶೀಘ್ರ ನಿರ್ಧಾರ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ 2024 ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಮತ್ತು 2020 ಜನವರಿ 1ರಿಂದ ಹೆಚ್ಚಳವಾಗಿರುವ ವೇತನ ಹಿಂಬಾಕಿಯನ್ನು ಅತೀ ಶೀಘ್ರದಲ್ಲೇ ಕೊಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮಹಾಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವತಿಯಿಂದ ಕಲಬುರಗಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಸಾರಿಗೆ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ 2024 ಜನವರಿ 1ರಿಂದ ಆಗಬೇಕಿದೆ. ಇದರ ಜತೆಗೆ 2020 ಜನವರಿ 1ರಿಂದ ಜಾರಿಯಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಕೊಡುವ ಬಗ್ಗೆಯೂ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಇನ್ನು ಅಧಿವೇಶನ ಮುಗಿದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು 1.1.2020ರ ವೇತನ ಅರಿಯರ್ಸ್ ನಿವೃತ್ತ ನೌಕರರಿಗೂ ಸಹ ಪರಿಷ್ಕರಣೆ ಮಾಡಲು ಒಪ್ಪಿದ್ದು ತ್ವರಿತವಾಗಿ ಆದೇಶವನ್ನು ಹೊರಡಿಸಲಾಗುವುದೆಂದು ಆಶ್ವಾಸನೆ ನೀಡಿದರು. 2020ರ ಜನವರಿ 1ರಿಂದ ಶೇ.15ರಷ್ಟು ವೇತನ ಹೆಚ್ಚಳವಾಗಿದ್ದು ಅಂದಿನಿಂದಲೇ ಈ ವೇತನ ಹೆಚ್ಚಳದ ಹಿಂಬಾಕಿಯನ್ನು ಕೊಡಬೇಕು, ಈ ನಡುವೆ ನಿವೃತ್ತರಾದ ನೌಕರರು ಮತ್ತು ಅಧಿಕಾರಿಗಳಿಗೂ ಅವರು ನಿವೃತ್ತಿ ಹೊಂದಿದ ದಿನದವರೆಗೂ ಅದು ಜಮೆಯಾಗಬೇಕು ಎಂಬುವುದು ನಮ್ಮ ಗಮನದಲ್ಲಿದೆ ಎಂದು ಹೇಳಿದರು.

ಈ 2020ರ ವೇತನ ಹೆಚ್ಚಳದ ಶೇ.15ರಷ್ಟು ಅರಿಯರ್ಸ್‌ ಕೊಡದೆ ಮತ್ತೆ 2024ರ ವೇತನ ಪರಿಷ್ಕರಣೆ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಅಲ್ಲದೆ ನೌಕರರು ಕೂಡ ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ ಈ ಎಲ್ಲವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.

ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಈ ಬಗ್ಗೆ ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದರೆ ನಮಗೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಆದರೆ ಅಂದಿನ ಸರ್ಕಾರ ಮಾಡಿದ ಎಡವಟ್ಟಿನಿಂದ ನಾವು ಇಂದು ಸಮಯ ತೆಗೆದುಕೊಳ್ಳಬೇಕಿದೆ. ಆದರೂ ಚಿಂತೆಯಿಲ್ಲ ನೌಕರರಿಗೆ ಒಳ್ಳೆಯದಾಗುವ ನಿರ್ಧಾರವನ್ನೇ ನಮ್ಮ ಸಿಎಂ ತೆಗೆದುಕೊಳ್ಳಲಿದ್ದಾರೆ ಎಂದು ನೌಕರರಿಗೆ ಭರವಸೆ ನೀಡಿದರು.

ಸಮಾರಂಭದಲ್ಲಿ ಸಚಿವರಾದ ಶರಣಬಸಪ್ಪ ಗೌಡ ದರ್ಶನಪೂರ್, ಪ್ರಿಯಾಂಕ್ ಖರ್ಗೆ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಂ ಪ್ರಭು ಪಾಟೀಲ್, ಶ್ರೀಮತಿ ಕನೀಝ್ ಫಾತಿಮಾ, ತಿಪ್ಪಣ್ಣ ಕಮಕನೂರ, ಸಾರಿಗೆ ನೌಕರರ ಮಹಾಮಂಡಳಿ ಪದಾಧಿಕಾರಿಗಳು, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು, ಮುಖಂಡರು ಇದ್ದರು.

Leave a Reply

error: Content is protected !!
LATEST
KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್‌ಡಿಕೆಗೆ ಜೆಡಿಎಸ್ ನಾಯಕರಿಂದ ಅದ್ದೂರಿ ಸ್ವಾಗತ ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ - ಜೂ.17ರಿಂದ ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ KSRTC: ಬಾನಂದೂರು - ಶ್ರೀಕ್ಷೇತ್ರ ಆದಿ ಚುಂಚನಗರಿ ನಡುವಿನ ಬಸ್‌ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಸಂಬಂಧ ಕರೆದಿದ್ದ ಎಂಡಿಗಳ ಸಭೆ ಮುಂದೂಡಿಕೆ KSRTC- 3ನಿಗಮಗಳ 15 ಡಿಸಿಗಳ ವರ್ಗಾವಣೆ ಮಾಡಿ ಆದೇಶ: ಸಿಪಿಎಂ KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಬಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ KSRTC: ನಾಳೆಯಿಂದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಜನ್ಮಸ್ಥಳ ಬಾನಂದೂರು- ಆದಿ ಚುಂಚನಗಿರಿಗೆ ನೇರ ಬಸ್ ಸೌಕರ್ಯ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಸಂಬಂಧ ಸಚಿವರ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ