Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KSRTC- 2024 ಜ.1 ರಿಂದ ಆಗಬೇಕಿರುವ ವೇತನ ಹೆಚ್ಚಳ‌ದ ಬಗ್ಗೆ ಆರ್ಥಿಕ ಪರಿಸ್ಥಿತಿ ನೋಡಿ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಚಿವರು ರಾಮಲಿಂಗಾ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರು ಎಸ್.ಆರ್. ಶ್ರೀನಿವಾಸ್( ವಾಸು) ಅವರ ಉಪಸ್ಥಿತಿಯಲ್ಲಿ, ನಿಗಮದ 11 ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಗುರುವಾರ ಕುಂದು ಕೊರತೆಗಳ ಸಭೆ ನಡೆಯಿತು.

ಶಾಂತಿನಗರದಲ್ಲಿರುವ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಸಂಘಟನೆಗಳ ಮುಖಂಡರು ತಮ್ಮ ತಮ್ಮ ಬೇಡಿಕೆಗಳು ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು.

ಈ ವೇಳೆ ಮುಖ್ಯವಾಗಿ 01-01-2020 ರಿಂದ 28-02-2023 ರವರೆಗಿನ ವೇತನ ಬಾಕಿ ಹಣ ಹಾಗೂ 01-01-2024 ರಿಂದ ಮೂಲ ವೇತನ‌ ಹೆಚ್ಚಳ ಹಾಗೂ 01-01-2020 ರಿಂದ 28-02-2023ರ ವರೆಗಿನ ವೇತನ ಹೆಚ್ಚಳದ ಬಾಕಿಯನ್ನು ನಿವೃತ್ತ ಹಾಗೂ ಇತರೆ ಕಾರಣಗಳಿಂದ ಸಂಸ್ಥೆಗಳಿಂದ ಹೊರ ಹೋಗಿರುವ ನೌಕರರ ಹಾಗೂ ಇತರೆ ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ವಿಸ್ತೃತವಾಗಿ ಚರ್ಚೆ ನೆಸಿದ ಬಳಿಕ ಅಂತಿಮವಾಗಿ 01-01-2020 ರಿಂದ 28-02-2023ರ ನಡುವೆ ನಿವೃತ್ತಿ ಹೊಂದಿರುವ ಹಾಗೂ ಸಂಸ್ಥೆಯಿಂದ ಹೊರಗೆ ಹೋಗಿರುವ ಎಲ್ಲ ಅಂದಾಜು 10 ಸಾವಿರ ಅಧಿಕಾರಿಗಳು ಮತ್ತು ನೌಕರರಿಗೆ ಕೊಡಬೇಕಿರುವ ಶೇ.15 ರಷ್ಟು ವೇತನ ಹೆಚ್ಚಳದ ಹಣ 220 ಕೋಟಿ ರೂ.ಗಳನ್ನು ನೀಡುವುದಾಗಿ ಸಾರಿಗೆ ಸಚಿವರು ಭರವಸೆ ನೀಡಿದರು.

ಅಲ್ಲದೆ ಸಭೆಯಲ್ಲಿ ಹಾಜರಿದ್ದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ‌ ನಿರ್ದೇಶಕರಿಗೆ ಕೂಡಲೇ ಆದೇಶ ಹೊರಡಿಸಲು ಸೂಚಿಸಿದರು. ಈ‌ ಕ್ರಮಕ್ಕಾಗಿ ಎಲ್ಲ ಸಂಘಟನೆಗಳು ಹರ್ಷ ವ್ಯಕ್ತಪಡಿಸಿ, ಸಾರಿಗೆ ಸಚಿವರು, ನಾಲ್ಕೂ ನಿಗಮಗಳ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಗೆ ತಲೆಬಾಕಿ ನಮಿಸಿದರು.

ಇನ್ನು 01-01-2024 ರಿಂದ ಮಾಡಬೇಕಾಗಿರುವ ವೇತನ ಹೆಚ್ಚಳ‌ದ ಬಗ್ಗೆ ಮಾತನಾಡಿ, ಮುಂದಿನ‌ ದಿನಗಳಲ್ಲಿ ಹೊಸ ಬಸ್‌ಗಳು ಸೇರ್ಪಡೆಯಾಗಿ ಆದಾಯ ವೃದ್ಧಿಸಲಿದ್ದು, ಆರ್ಥಿಕ ಪರಿಸ್ಥಿತಿಯನ್ನು ಗಣನೆಗೆ ತೆಗದುಕೊಂಡು ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಅಲ್ಲದೆ ಇದು ಮೊದಲ ಸಭೆಯಾಗಿರುವುದರಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಮುಂದಿನ ಸಭೆಗಳಲ್ಲಿ ಹಲವು ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಚರ್ಚೆ ಮಾಡಿ ಮುಂದುವರಿಯೋಣ ಇದು ನಿಮ್ಮ ಸಂಸ್ಥೆ ಈ‌ ಸಂಸ್ಥೆಗಳನ್ನು‌ ಉಳಿಸಿ‌ ಬೆಳೆಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಿವಿಮಾತು ಹೇಳಿದರು.

ಇನ್ನು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ, ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗಲು ತಮ್ಮೆಲ್ಲರ ಸಹಕಾರ ಬೇಕು ಎಂದು ಸಾರಿಗೆ ಸಚಿವರು ಮನವಿ ಮಾಡಿದರು. ಆದರೆ, ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಹೆಚ್ಚಳದ ಹಿಂಬಾಕಿ ಕೊಡುವ ಬಗ್ಗೆ ಯಾವುದೇ ಭರವಸೆಯನ್ನು ಕೊಡಲಿಲ್ಲ.

ಇಷ್ಟಾದರೂ ಸಭೆಯಲ್ಲಿದ್ದ ಸಂಘಟನೆಗಳ ನೌಕರರು ಸದ್ಯ ನಿವೃತ್ತ ನೌಕರರಿಗೆ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದರಲ್ಲ ಅಷ್ಟೇ ಸಾಕು ಎಂಬಂತೆ 32 ಹಲ್ಲುಗಳು ಕಿಸಿದು ಹೊರಬಂದರು. ನೋಡಿ ನಿವೃತ್ತ ನೌಕರರಿಗೆ ಹಿಂಬಾಖಿ ಕೊಡುವ ನಿರ್ಧಾರ ಏಕೆ ತೆಗೆದುಕೊಂಡಿದ್ದಾರೆ ಎಂದರೆ, ಮೈಸೂರು ಭಾಗದ ನಿವೃತ್ತ ಸಾರಿಗೆ ನೌಕರರು ಮತ್ತು ಅಧಿಕಾರಿಗಳು ಈ ಸಂಬಂಧ ಕೋರ್ಟ್‌ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದರು.

ಅಲ್ಲದೆ ಈ ಬಗ್ಗೆ ಕೇಂದ್ರ ಕಾರ್ಮಿಕ ಸಚಿವರಿಗೂ ಪತ್ರಬರೆದು ಮನವಿ ಮಾಡಿದ್ದರು. ಈ ಎಲ್ಲದರ ಫಲವಾಗಿ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯವನ್ನು ಕೊಡುವುದಕ್ಕೆ ಸಾರಿಗೆ ಸಚಿವರು ಒಪ್ಪಿಕೊಂಡಿದ್ದಾರೆಯೇ ಹೊರತು ಈ ಸಂಘಟನೆಗಳ ಮನವಿಗೆ ಸೋತು ಒಪ್ಪಿಕೊಂಡಿಲ್ಲ. ಒಂದು ವೇಳೆ ಸಂಘಟನೆಗಳ ಮನವಿ ಸ್ಪಂದಿಸಿದ್ದರೆ ಸಮಸ್ತೆ ಸಾರಿಗೆ 1.25 ಲಕ್ಷ ಅಧಿಕಾರಿಗಳು/ ನೌಕರರಿಗೂ ಬರಬೇಖಿರುವ 38 ತಿಂಗಳ ಹಿಂಬಾಕಿಯನ್ನು ಕೊಡುವುದಾಗಿ ಹೇಳುತ್ತಿದ್ದರು. ಆದರೆ, ಆ ರೀತಿ ಮಾಡಿಲ್ಲ.

ಸಭೆಯಲ್ಲಿ, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಬಿಎಂಟಿಸಿ ‌ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, ಎನ್‌ಡಬ್ಲ್ಯುಕೆಆರ್‌ಟಿಸಿ ‌ವ್ಯವಸ್ಥಾಪಕ ನಿರ್ದೇಶಕ ಎಸ್. ಭರತ್, ಕೆಕೆಆರ್‌ಟಿಸಿ ‌ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಕೆಎಸ್‌ಆರ್‌ಟಿಸಿ ನಿರ್ದೇಶಕಿ (ಭ& ಜಾ) ಡಾ. ಕೆ ನಂದಿನಿದೇವಿ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್