NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆದಾಯ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕ-2 ಮತ್ತೊಮ್ಮೆ ಪ್ರಥಮ ಸ್ಥಾನ ಪಡೆದಿದೆ ಎಂದು ತಿಳಿಸಲು ಸಂತಸವಾಗುತ್ತಿದೆ. ಈ ಸಾಧನೆಗೆ ಕಾರಣರಾದ ಪ್ರತಿಯೊಬ್ಬ ಸಿಬ್ಬಂದಿಗೂ ಹೃದಯಪೂರ್ವಕ ಧನ್ಯವಾದ ಎಂದು ಘಟಕ ವ್ಯವಸ್ಥಾಪಕ ಕಾಂತರಾಜ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಮ್ಮೆಲ್ಲರ ಪರಿಶ್ರಮದಿಂದ ಘಟಕ-2 ನ.4ರಂದು 39.38 ಲಕ್ಷ ರೂಪಾಯಿ ಸಾರಿಗೆ ಆದಾಯ ಸಂಗ್ರಹಣೆ ಮಾಡಿ, ಆದಾಯ ಸಂಗ್ರಹಣೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಈ ಸಾಧನೆಗೆ ಕಾರಣರಾದ ಘಟಕದ ಸಮಸ್ತ ಸಿಬ್ಬಂದಿಗಳ ಶ್ರಮ ನಮ್ಮ ಅರಿವಿಗೆ ಬಂದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಶ್ಲಾಘಿಸಿದ್ದಾರೆ.

ಇನ್ನು ಅ.30 ರಿಂದ ನ.4ರವರೆಗೆ ಸತತವಾಗಿ 6 ದಿನಗಳು KSRTC ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಹಗಲು-ರಾತ್ರಿ ಎನ್ನದೇ, 24X7 ಕರ್ತವ್ಯ ನಿರ್ವಹಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರವರ ಊರುಗಳಿಗೆ ತಲುಪಿಸಿ, ಅವರ ಖುಷಿಯಲ್ಲೇ ತಮಗಾಗುತ್ತಿದ್ದ ಆಯಾಸ, ನೋವನ್ನು ಮರೆತ ನಮ್ಮ ಪ್ರೀತಿಯ ಚಾಲಕರು ಹಾಗೂ ನಿರ್ವಾಹಕರ ಕಾರ್ಯಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಅನಂತಾನಂತ ಧನ್ಯವಾದಗಳನ್ನು ತಿಳಿಸಿದ್ದಾರೆ.

ಅಲ್ಲದೆ ತನ್ನ ಕುಟುಂಬದವರೊಂದಿಗೆ ದೀಪಾವಳಿ ಹಬ್ಬ ಆಚರಿಸದೇ, ಸಾರ್ವಜನಿಕರ ಸೇವೆಗೆ ನಿಂತ ನಿಮ್ಮ ನಿಲುವು ಇತರ ಇಲಾಖೆಯ ಸಿಬ್ಬಂದಿಗಳಿಗೆ ಮಾದರಿ. ಸತತ 6 ದಿನಗಳ ಕಾಲ ಸಾವಿರಾರು ಕಿಲೋ ಮೀಟರ್‌ ವಾಹನ ಚಾಲನೆ ಮಾಡಿದರೂ ಒಂದು ಸಣ್ಣ ಅಪಘಾತವಾಗದಂತೆ ಎಚ್ಚರಿಕೆ ಹಾಗೂ ಜವಾಬ್ದಾರಿಯಿಂದ ವಾಹನ ಚಾಲನೆ ಮಾಡಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರವರ ಮನೆಗಳಿಗೆ ತಲುಪಿಸಿದ ಚಾಲನಾ ಸಿಬ್ಬಂದಿಗಳ ಶ್ರಮಕ್ಕೆ ಬೆಲೆಕಟ್ಟಲಾಗದು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇನ್ನು ಸರ್ಕಾರದ “ಶಕ್ತಿ” ಯೋಜನೆಯಿಂದಾಗಿ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಒತ್ತಡದ ನಡುವೆ ಯಾವುದೇ ದೂರುಗಳಿಗೆ ಅವಕಾಶ ನೀಡದೇ 39.38 ಲಕ್ಷ ರೂಪಾಯಿಗೂ ಹೆಚ್ಚು ಸಾರಿಗೆ ಆದಾಯ ಸಂಗ್ರಹಣೆ ಮಾಡಿದ ನಿರ್ವಾಹಕರು ಕೂಡ ತಮ್ಮ ಜವಾಬ್ದಾರಿಯನ್ನು ಅಚ್ಚಕಟ್ಟಾಗಿ ನಿಭಾಯಿಸಿದ್ದಾರೆ.

ವಾಹನಗಳು ಸಾವಿರಾರು ಕಿಮೀ ಕ್ರಮಿಸಿದರೂ ಒಂದು ಸಣ್ಣ ಅವಘಡವೂ ಆಗದಂತೆ ವಾಹನಗಳನ್ನು ಸಿದ್ಧಪಡಿಸಿ, ಮಾರ್ಗಾಚರಣೆಗೆ ನೀಡಿದ ಘಟಕದ ಸಮಸ್ತ ತಾಂತ್ರಿಕ ಸಿಬ್ಬಂದಿ ವರ್ಗದವರ ಶ್ರಮವನ್ನು ನಾವು ಮರೆಯುವಂತಿಲ್ಲ. ಜತೆಗೆ ಈ ಸಾಧನೆಗೆ ಕಾರಣರಾದ ಸಂಚಾರ ಶಾಖೆ, ತಾಂತ್ರಿಕ ಶಾಖೆ, ಚೀಟಿ ಶಾಖೆ, ಭದ್ರತಾ ಶಾಖೆ ಮತ್ತು AVLS ಸಿಬ್ಬಂದಿಗಳು ಈ ಸಾಧನೆಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಕಾರಣರಾಗಿದ್ದಾರೆ. ನಮ್ಮ ಘಟಕದ ಸಮಸ್ತ ಸಿಬ್ಬಂದಿಗಳ ಶ್ರಮದಿಂದ ನಾವು ಇಂದು ಆದಾಯ ಗಳಿಕೆಯಲ್ಲಿ ನಂ.1 ಸ್ಥಾನದಲ್ಲಿ ಇದ್ದೇವೆ ಎಂದು ಕಾಂತರಾಜ್‌ ತಿಳಿಸಿದ್ದಾರೆ.

ನಮ್ಮ ಈ ಶ್ರಮ ಸಾಧನೆಯನ್ನು ನೋಡಿಯಾದರೂ ಸರ್ಕಾರ ಮತ್ತು ಸಾರಿಗೆ ಆಡಳಿತ ಮಂಡಳಿಗಳು ಇನ್ನಾದರೂ ಸಮಸ್ತೆ ಅಧಿಕಾರಿಗಳು-ನೌಕರರ ಬೇಡಿಕೆಯಾಗಿರುವ 7ನೇ ವೇತನ ಆಯೋಗವನ್ನು ಅಳವಡಿಸಿ ನಮಗೂ ಸರಿ ಸಮಾನ ವೇತನ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಕೊಡಲು ಮನಸ್ಸು ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!