NEWSನಮ್ಮಜಿಲ್ಲೆನಮ್ಮರಾಜ್ಯ

KSRTC- 3ನಿಗಮಗಳ 15 ಡಿಸಿಗಳ ವರ್ಗಾವಣೆ ಮಾಡಿ ಆದೇಶ: ಸಿಪಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ 15ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಿಡಿಸಿದ್ದಾರೆ.

ಪ್ರಸ್ತುತ KSRTC ಕೇಂದ್ರ ಕಚೇರಿಯಲ್ಲಿ ಮುಖ್ಯ ಕಾನೂನು ಅಧಿಕಾರಿಯಾಗಿದ್ದ ಪ್ರಸನ್ನಕುಮಾರ ಬಾಳನಾಯಕ್ ಅವರನ್ನು NWKRTC ಕೇಂದ್ರ ಕಚೇರಿಗೆ ಮುಖ್ಯ ಕಾನೂನು ಅಧಿಕಾರಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

KSRTC ನಿಗಮ ಮಾಲೂರಿನಲ್ಲಿರುವ ಕೇಂದ್ರೀಯ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿದ್ದ ಕೆ.ಆರ್. ವಿಶ್ವನಾಥ ಅವರನ್ನು ನಿಗಮ ಶಿವಮೊಗ್ಗ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

ನಿಗಮ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್. ಹೆಬ್ಬಾಳ್ ಅವರನ್ನು ದಾವಣಗೆರೆ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ, ನಿಗಮ ಶಿವಮೊಗ್ಗ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ವಿಜಯಕುಮಾರ ಅವರನ್ನು NWKRTCಗೆ ನಿ 17/1 ರಡಿ ಉಪ ಮುಖ್ಯ ಸಂಚಾರ ವ್ಯವಸ್ಥಾಪಕರಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

ನಿಗಮದ ಪುತ್ತೂರು ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಬಿ. ಅವರನ್ನು ಬಿಎಂಟಿಸಿ ಪಶ್ಚಿಮ ವಲಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ನಿಗಮದ ಪ್ರಾದೇಶಿಕ ತರಬೇತಿ ಕೇಂದ್ರ ಹೊಳಲ್ಕೆರೆಯಲ್ಲಿ ಪ್ರಾಂಶುಪಾಲರಾಗಿದ್ದ ನವೀನ್ ಟಿ.ಆರ್. ಅವರನ್ನು ನಿಗಮ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

ನಿಗಮದ ಕೋಲಾರ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು ಅವರನ್ನು ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಮತ್ತು ನಿಗಮದ ರಾಮನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಎಂ. ಅವರನ್ನು ಬಿಎಂಟಿಸಿ ಕೇಂದ್ರೀಯ ವಿಭಾಗ (ವೋಲ್ಲೊ)ದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿಯಲ್ಲಿ ಉಪ ಮುಖ್ಯ ಯಾಂತ್ರಿಕ ಅಭಿಯಂತರರಾಗಿದ್ದ ಎಸ್‌.ಆರ್‌. ಕಿರಣ್ ಕುಮಾರ್ ಅವರನ್ನು ನಿಗಮ ರಾಮನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನೇಮಿಸಲಾಗಿದೆ. ಹಾಗೆಯೇಮಂಗಳೂರಿನ ಸಾರಿಗೆ ಇಲಾಖೆ ನಿಯಂತ್ರಣದಲ್ಲಿರುವ ಭಾರಿ ವಾಹನ ಚಾಲಕರ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೆ.ಸತ್ಯ ಸುಂದರಂ ಅವರನ್ನು ಬಿಎಂಟಿಸಿ ಪೂರ್ವ ವಲಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನಿಯೋಜನೆಗೊಳಿಸಿ ಆದೇಶಿಸಿದ್ದಾರೆ.

ಬಿಎಂಟಿಸಿ ಪೂರ್ವ ವಲಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎನ್. ಶ್ರೀನಾಥ್ ಅವರನ್ನು ಕೆಎಸ್‌ಆರ್‌ಟಿಸಿ ನಿ 17/1 ರಡಿ ಉಪ ಮುಖ್ಯ ಸಂಚಾರ ವ್ಯವಸ್ಥಾಪಕರಾಗಿ ನಿಯೋಜಿಸಿದ್ದರೆ, ಬಿಎಂಟಿಸಿ ಕೇಂದ್ರೀಯ ವಿಭಾಗದ (ವೋಲ್ಲೊ) ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಎಸ್‌. ನಾಗರಾಜ ಮೂರ್ತಿ ಅವರನ್ನು ಕೆಎಸ್‌ಆರ್‌ಟಿಸಿ ಉಪ ಮುಖ್ಯ ತಾಂತ್ರಿಕ ಅಭಿಯಂತರರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿ ಪಶ್ಚಿಮ ವಲಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ. ಸಿದ್ದಲಿಂಗೇಶ್ ಅವರನ್ನು NWKRTC ಹುಬ್ಬಳ್ಳಿ -ಧಾರವಾಡ ನಗರ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿಯೂ, ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಉಪ ಮುಖ್ಯ ಕಾನೂನು ಅಧಿಕಾರಿಯಾಗಿದ್ದ ಸತೀಶ್ ರಾಜು ಜೆ. ಅವರನ್ನು ಬಿಎಂಟಿಸಿಗೆ ನಿ 17/1 ರಡಿ ಉಪ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರಾಗಿ ನೇಮಿಸಲಾಗಿದೆ.

ನಿಗಮದ ದಾವಣಗೆರೆ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸಮೂರ್ತಿ ಸಿ.ಇ. ಅವರನ್ನು ಚಿತ್ರದುರ್ಗ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನಿಯೋಜಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇನ್ನು ಸಿದ್ದೇಶ್ವರ ಎನ್‌ ಹೆಬ್ಬಾಳ್, ಎಂ.ಜಗದೀಶ್ ಹಾಗೂ ಎಸ್‌.ಆರ್‌. ಕಿರಣ್ ಕುಮಾರ್ ಇವರ ವರ್ಗಾವಣೆಯನ್ನು ಕೋರಿಕೆ ಮೇರೆಗೆ ಪರಿಗಣಿಸಿದ್ದು ವರ್ಗಾವಣಾ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಇನ್ನುಳಿದ ಅಧಿಕಾರಿಗಳ ವರ್ಗಾವಣೆಯನ್ನು ಆಡಳಿತಾತ್ಮಕ ಕಾರಣಗಳ ಮೇರೆಗೆ ಪರಿಗಣಿಸಿದ್ದು, ಕಾರ್ಯಕ್ಷೇತ್ರದಲ್ಲಿ ಬದಲಾವಣೆ ಇರುವ ಅಧಿಕಾರಿಗಳು ಮಾತ್ರ ನಿಯೋಜನಾ ಸೌಲಭ್ಯಕ್ಕೆ ಅರ್ಹರಿರುತ್ತಾರೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ