CrimeNEWSನಮ್ಮಜಿಲ್ಲೆ

KSRTC: ಮಗನ ಚಿಕಿತ್ಸೆಗಾಗಿ ಮಾರಲು ತರುತ್ತಿದ್ದ 3.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ವಿಜಯಪಥ ಸಮಗ್ರ ಸುದ್ದಿ

ಕೊಳ್ಳೇಗಾಲ: ಮಗನ ಚಿಕಿತ್ಸೆ ಹಣಹೊಂದಿಸಲು ಸಾಧ್ಯವಾದೆ ತಮ್ಮ ಬಳಿಯಿದ್ದ ಚಿನ್ನಾಭರಣ ಮಾರಲು ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ KSRTC ಬಸ್‌ನಲ್ಲಿ ಬರುತ್ತಿದ್ದ ವೇಳೆ 117 ಗ್ರಾಂ ಚಿನ್ನಾಭರಣಗಳನ್ನು ಖದೀಮರು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ತಿ.ನರಸೀಪುರ ತಾಲೂಕಿನ ಕಲಿಯೂರು ಗ್ರಾಮದ ಕೆ.ರಾಜೇಶ ಎಂಬವರು 3.51 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 15 ಸಾವಿರ ರೂ. ನಗದು, ಇತರೆ ದಾಖಲಾತಿಗಳನ್ನು ಇಟ್ಟಿದ್ದ ಬ್ಯಾಗನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.

ದುಷ್ಕರ್ಮಿಗಳು ಸುಮಾರು 3.51 ಲಕ್ಷ ರೂ. ಮೌಲ್ಯದ 117 ಗ್ರಾಂ ಚಿನ್ನಾಭರಣವಿದ್ದ ಬ್ಯಾಗ್‌ ಎಗರಿಸಿದ್ದಾರೆ.

ಕೆ.ರಾಜೇಶ್ ಬೆಂಗಳೂರಿನ ಕೆನರಾ ಬ್ಯಾಂಕ್‌ನಲ್ಲಿ ಪ್ರಬಂಧಕರಾಗಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಮಗ ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ತಮ್ಮ ಕುಟುಂಬದ ಚಿನ್ನಾಭರಣಗಳನ್ನು ಮಾರಾಟ ಮಾಡುವ ಸಲುವಾಗಿ ಚಿನ್ನ, ಹಣ ಹಾಗೂ ಇತರೆ ದಾಖಲಾತಿಗಳನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಬೆಂಗಳೂರಿನ ಬಸ್ ನಿಲ್ದಾಣದಿಂದ ಬಸ್ ಹತ್ತಿ ಸೀಟ್ ಮೇಲಿನ ಲಗೇಜ್ ಇಡುವ ಸ್ಥಳದಲ್ಲಿ ಬ್ಯಾಗ್ ಇಟ್ಟಿದ್ದರು.

ಕೊಳ್ಳೇಗಾಲಕ್ಕೆ ಬಂದ ನಂತರ ಇಳಿಯುವ ವೇಳೆ ಸೀಟ್ ಮೇಲಿನ ಲಗೇಜ್ ಜಾಗದಲ್ಲಿ ನೋಡಿದಾಗ ಚಿನ್ನಾಭರಣ, ನಗದು ಇಟ್ಟಿದ್ದ ಬ್ಯಾಗ್ ಕಳುವಾಗಿರುವ ಗೊತ್ತಾಗಿದೆ.

ಬಸ್ಸಿನಲ್ಲಿ ಎಲ್ಲ ಕಡೆ ಬಸ್ ಚಾಲಕ ಹಾಗೂ ನಿರ್ವಾಹಕರ ಜತೆ ಹುಡುಕಾಡಿದರೂ ಬ್ಯಾಗ್ ಸಿಗಲಿಲ್ಲ. ಯಾರಾದರೂ ಮಾನವೀಯತೆ ದೃಷ್ಟಿಯಿಂದಲಾದರೂ ತಂದುಕೊಡಬಹುದೆಂದು ಕಾದರೂ ಯಾರೂ ಬರಲಿಲ್ಲವಾದ್ದರಿಂದ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕಳವಾಗಿರುವ ಚಿನ್ನಾಭರಣ ಹಾಗೂ ನಗದು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ