CRIMENEWSನಮ್ಮರಾಜ್ಯ

KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಕೆಎಸ್ಸಾರ್ಟಿಸಿ ಬಸ್‌ಗೆ ದಾರಿ ಮಧ್ಯೆ ಬೆಂಕಿ ಹೊತ್ತಿಕೊಂಡಿದೆ. ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 17 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಧಗಧಗನೇ ಹೊತ್ತಿ ಉರಿದ ಘಟನೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದ ಬಳಿ ನಡೆದಿದೆ.

ಕೆಎಸ್ಸಾರ್ಟಿಸಿ ಬಸ್‌ಗೆ ದಾರಿ ಮಧ್ಯೆ ಬೆಂಕಿ ಹೊತ್ತಿಕೊಂಡಿದೆ. ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 17 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆರಂಭದಲ್ಲಿ ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಪಲ್ಲಕ್ಕಿ ಬಸ್ ಬೆಂಕಿಗಾಹುತಿಯಾಗಿದೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೆಯೇ ಹೆದ್ದಾರಿಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದಾರೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ಯಾಕೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ