ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಸಮಸ್ಯೆ ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ಇಂದು (ಫೆ.8) ಬೆಳಗ್ಗೆ 11 ಗಂಟೆಗೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರ ಸಭೆಯನ್ನು ಚಂದ್ರ ಲೇಔಟ್‌ನಲ್ಲಿರುವ ಕನಕ ಭವನದಲ್ಲಿ ಕರೆಯಲಾಗಿದೆ.

ಇಂದು ಬೆಳಗ್ಗೆ 11ಗಂಟೆಗೆ ನಡೆಯುವ ಸಭೆಗೆ ನೌಕರರ ಕೂಟದ ಎಲ್ಲ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಭಾಗವಹಿಸಿ ತಮ್ಮ ಅಮೂಲವ್ಯಾದ ಸಲಹೆ ಸೂಚನೆಗಳನ್ನು ಕೊಟ್ಟು ಚರ್ಚಿಸಬೇಕು ಎಂದು ಕೂಟದ ರಾಜ್ಯಾಧ್ಯಕ್ಷ ಆರ್.ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಇನ್ನು ಈಗಾಗಲೇ ಕೂಟದಿಂದ ಎರಡು ಸಭೆಗಳನ್ನು ನಡೆದಿದ್ದು, ಇಂದು ಅಂತಿಮ ಸಭೆ ನಡೆಯಲಿದೆ. ಹೀಗಾಗಿ ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ತಪ್ಪದೆ ಬನ್ನಿ ಎಂದು ಕೋರಿದ್ದಾರೆ.
ನೌಕರರ ಪ್ರಮುಖ ಬೇಡಿಕೆಗಳಾದ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಇದರ 24 ತಿಂಗಳ ಹಿಂಬಾಕಿ ಮತ್ತು 2020 ಜನವರಿ 1ರಿಂದ ಅನ್ವಯವಾಗುವಂತೆ ಆಗಿರುವ ಶೆ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬಗ್ಗೆಯೂ ಸದಸ್ಯರು ಚರ್ಚಿಸಲಿದ್ದು, ಸರ್ಕಾರದ ಗಮನವನ್ನು ಹೇಗೆ ಸೆಳೆಯಬೇಕು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಸದಸ್ಯರು ನೀಡಲಿದ್ದಾರೆ ಎನ್ನಲಾಗಿದೆ.
Related










