NEWSಉದ್ಯೋಗನಮ್ಮಜಿಲ್ಲೆನಮ್ಮರಾಜ್ಯ

KSRTCಗೆ 264 ಮಂದಿಗೆ ನೇಮಕಾತಿ ಆದೇಶ ಪತ್ರ ವಿತರಣೆ, ಮಾರ್ಚ್‌ ನಂತರ ಇನ್ನಷ್ಟು ನೌಕರರ ಸೇರ್ಪಡೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ನನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬುಧವಾರ 264 ಮಂದಿ ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಮೂಲಕ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು.

ಕೆಎಸ್‌ಆರ್‌ಟಿಸಿಗೆ ನೇಮಕವಾದ 264 ತಾಂತ್ರಿಕ ಸಹಾಯಕ ಅಭ್ಯರ್ಥಿಗಳಿಗೆ ಆದೇಶ ನೀಡಿದ ಬಳಿಕ ಮಾತನಾಡಿದ ಅವರು, ಎಸ್‌ಆರ್‌ಟಿಸಿಗೆ ಮಾರ್ಚ್ ನಂತರ ಮತ್ತಷ್ಟು ತಾಂತ್ರಿಕ‌ ಸಹಾಯಕ‌ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದಕ್ಕೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯಲಾಗುವುದು ಎಂದು ತಿಳಿಸಿದರು.

ಇತ್ತ ನಿವೃತ್ತಿ ಮತ್ತು ಇತರ ಕಾರಣಗಳಿಂದ 2016 ರಿಂದ ಇಲ್ಲಿಯವರೆಗೆ ಸಾರಿಗೆ ನಿಗಮಳಲ್ಲಿ ಒಟ್ಟಾರೆ 13,888 ಹುದ್ದೆಗಳು ತೆರವಾಗಿದ್ದು, ಈವರೆಗೂ ಭರ್ತಿ ಮಾಡಿರಲಿಲ್ಲ. ಇದರಿಂದ ಸರ್ಕಾರಿ ಬಸ್‌ಗಳನ್ನು ಸಮರ್ಪಕವಾಗಿ ಕಾರ್ಯಾಚರಣೆ ಮಾಡುವುದಕ್ಕೆ ಆಗದೆ ತೊಂದರೆಯುಂಟಾಗುತ್ತಿತ್ತು, ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಲಾಗುತ್ತಿದೆ ಎಂದು ಹೇಳಿದರು.

ನಿಗಮದಲ್ಲಿ ಪ್ರಸ್ತುತ 4,588 ತಾಂತ್ರಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 353 ಮಹಿಳಾ ತಾಂತ್ರಿಕ ಸಿಬ್ಬಂದಿ ಇದ್ದಾರೆ. ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ 726 ತಾಂತ್ರಿಕ ಸಹಾಯಕ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು 2023ರ ಅಕ್ಟೋಬರ್‌ನಲ್ಲಿ ಆರ್ಥಿಕ ಇಲಾಖೆ ಅನುಮತಿ ನೀಡಿತ್ತು. ಆಯ್ಕೆಯಾದ ಅಭ್ಯರ್ಥಿಗಳನ್ನು ಮೆರಿಟ್‌ ಮತ್ತು ರೋಸ್ಟರ್ ಆಧಾರದಲ್ಲಿ ಅವರೇ ಆಯ್ಕೆ ಮಾಡಿಕೊಂಡ ಘಟಕಗಳಿಗೆ ನಿಯೋಜನೆ ಮಾಡಲಾಗಿದೆ ಎಂದು ವಿವರಿಸಿದರು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಇದೇ ಮೊದಲ ಬಾರಿಗೆ ಗಣಕೀಕೃತ ಕೌನ್ಸೆಲಿಂಗ್ ಕೂಡ ಮಾಡುವ ಮೂಲಕ ನೇರವಾಗಿ ಘಟಕಗಳನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅವರೀಗೆ ಅವಕಾಶ ನೀಡಲಾಗಿತ್ತು. ಇನ್ನು ಈ ಮೂಲಕ ಸ್ಥಳ ನಿಯೋಜನೆಯಲ್ಲಿ ಪಾರದರ್ಶಕತೆ ಅನುಸರಿಸಲಾಗಿದೆ. ತಾಂತ್ರಿಕ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು 3 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

ಇನ್ನೊಂದು ಪ್ರಮುಖವಿಷಯವೆಂದರೆ ಅಧಿಸೂಚನೆ ಸಂದರ್ಭದಲ್ಲಿ ನಿಗದಿಪಡಿಸಲಾಗಿದ್ದ 2 ವರ್ಷಗಳ ತರಬೇತಿ ಅವಧಿಯನ್ನು 1 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ತಿಂಗಳ ತರಬೇತಿ ಭತ್ಯೆಯನ್ನು9,100 ರೂಪಾಯಿಂದ 14,000 ರೂ.ಗಳಿಗೆ ಏರಿಸಲಾಗಿದೆ ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳೊಂದಿಗೆ ಖುಷಿಯ ವಿಷಯವನ್ನು ಹಂಚಿಕೊಂಡು, ತಮ್ಮ ಪರಿಶ್ರಮದಿಂದ ಸಂಸ್ಥೆಯನ್ನು ಬೆಳೆಸಬೇಕು ಎಂಬ ಕಿವಿ ಮಾತು ಸಹ ಹೇಳಿದರು.

ನಿಗಮವು 2000 ಚಾಲಕ–ನಿರ್ವಾಹಕ ಹುದ್ದೆಯ ನೇಮಕಾತಿಗಾಗಿ ಸದ್ಯದಲ್ಲಿಯೇ ಚಾಲನಾ ಪರೀಕ್ಷೆ ನಡೆಸಲಿದೆ ಎಂದು ಇದೇ ವೇಳೆ ತಿಳಿಸಿದರು.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ನಿರ್ದೇಶಕಿ (ಸಿಬ್ಬಂದಿ ಮಾತ್ತು ಜಾಗೃತೆ) ನಂದಿನಿ ದೇವಿ, ಪಿಆರ್‌ಒ ಡಾ.ಲತಾ ಸೇರಿದಂತೆ ನಿಗಮದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ