NEWSದೇಶ-ವಿದೇಶನಮ್ಮರಾಜ್ಯ

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ ಪಡೆದ ಕೆಎಸ್‌ಆರ್‌ಟಿಸಿ

ವಿಜಯಪಥ ಸಮಗ್ರ ಸುದ್ದಿ

ಸಿಂಗಾಪುರ್‌: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ -2023ರನ್ನು ಸಿಂಗಾಪುರ್‌ನಲ್ಲಿ ಪ್ರದಾನ ಮಾಡಲಾಯಿತು.

ಸಿಂಗಾಪುರ್‌ನಲ್ಲಿ ಗುರುವಾರ ಆ.17ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರಾದ ಮಂಜುಳ ನಾಯ್ಕ್‌ ಮತ್ತು ಮಂಡಳಿ ಕಾರ್ಯದರ್ಶಿ & ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಟಿ.ಎಸ್‌.ಲತಾ ಅವರು ಪ್ರಶಸ್ತಿ ಸ್ವೀಕರಿಸಿದರು.

World Sustainability Congress ಅವರು ಕೊಡಮಾಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಡಿ ಕೆಎಸ್‌ಆರ್‌ಟಿಸಿ ನಿಗಮವು ಆಯ್ಕೆಯಾಗಿತ್ತು.

World Sustainability Congress ಆಯೋಜಿಸಿದ್ದ ಸಮಾರಂಭದಲ್ಲಿ ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಫೈಡ್ ಪ್ರೋಫೆಶನಲ್ ಅಕೌಂಟೆಂಟ್ ಎನ್.ಜಿ. ವಿಲ್ಬರ್, ಚೀಫ್ ಎನ್ವೈರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಆಫೀಸರ್, ಕಂಪ್ಲಯನ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿ ಅಟಾರ್ನಿ ಕರೀನ ಲೆನೋರ್ ಎಸ್. ಬಯೋನ್ ಪ್ರಶಸ್ತಿ ಪ್ರದಾನ ಮಾಡಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು