KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ

ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29) ಕ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ನೂರಾರು ಸಂಖ್ಯೆಯಲ್ಲಿ ರಜೆಯಲ್ಲಿ ಇರುವ ನೌಕರರು ಭಾಗವಹಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರ ವಿವಿಧ ಸಂಘಟನೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದಡಿಯಲ್ಲಿ ಈ ಧರಣಿ ಸತ್ಯಾಗ್ರಹವನ್ನು ಇಂದು ಬೆಳಗ್ಗೆಯಿಂದ ಫ್ರೀಡಂ ಪಾರ್ಕ್ನಲ್ಲಿ ಆರಂಭಿಸಲಾಗಿದೆ.
ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅಧಿಕಾರಿಗಳು ನಮ್ಮ ಶಾಂತಿಯುತ ಹೋರಾಟವನ್ನು ಬೆಂಬಲಿಸುವುದಾಗಿ ವಿಜಯಪಥಕ್ಕೆ ತಿಳಿಸಿದ್ದು, ಅದಂತೆ ಈ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಕ್ಕೆ ಬೇಷರತ್ತಾಗಿ ಬೆಂಬಲ ನೀಡಿದ್ದಾರೆ.
ಇನ್ನು ಸಾರಿಗೆ ನೌಕರರಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಂದರೆ ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿ ಮಾಡಬೇಕು ಎಂದು ಬೇಡಿಕೆ ಸಮಸ್ತ ಅಧಿಕಾರಿಗಳು ಹಾಗೂ ನೌಕರರ ಆಗ್ರಹವಾಗಿದೆ.

ಇದರ ಜತೆಗೆ 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು (ನಿವೃತ್ತ ನೌಕರರಿಗೆ ಮೊದಲ ಅದ್ಯತೆಯಲ್ಲಿ ಅವರ ಹಿಂಬಾಕಿ ಮತ್ತು ಇತರೆ ಸೇವಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು.
ಇನ್ನು ಪ್ರಮುಖವಾಗಿ 2020 ಮತ್ತು 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ಆಗಿರುವ ವಜಾ ಮತ್ತು ಇತರೆ ಪ್ರಕರಣಗಳ ಶಿಕ್ಷಾದೇಶಗಳನ್ನು ರದ್ದು ಪಡಿಸಿ ಸೌಹರ್ದ ರೀತಿಯಲ್ಲಿ ಇತ್ಯರ್ಥ ಪಡಿಸುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಇದರ ನಡುವೆ ಸಾರಿಗೆ ಸಂಘಟನೆಗಳ ಮುಖಂಡರು ಅದರಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು 1992 ನಂತರ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಯದೆ ಇರುವುದರಿಂದ, ಕೂಡಲೆ” ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಮಾಡಲು ಆದೇಶ ಮಾಡಬೇಕು ಎಂದು ಒತ್ತಾಯಿಸಿ ಈ ಧರಣಿ ಹಮ್ಮಿಕೊಂಡಿದ್ದು, ನೌಕರರು ಹಾಗೂ ನೌಕರರ ಕುಟುಂಬದವರು ಧರಣಿಯಲ್ಲಿ ಭಾಗವಹಿಸುತ್ತಿದ್ದಾರೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...