NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ನೀಡಬೇಕಿರುವ ಪರಿಷ್ಕೃತ ಶೇ.15ರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಮೊತ್ತವನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟ (BMS) ಪ್ರತಿಭಟನಾ ಧರಣಿ ಹಮ್ಮಿಕೊಂಡಿತ್ತು

ಬುಧವಾರ ಬೆಳಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡ ನೌಕರರು ಮತ್ತು ಬಿಎಂಎಸ್‌ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಸರ್ಕಾರ ಮತ್ತು ನಿಗಮಗಳ ಆಡಳಿತ ಮಂಡಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಕಳೆದ 2020ರ ಜನವರಿ 1ರಿಂದ ವೇತನ ಪರಿಷ್ಕರಣೆ ಜಾರಿಗೆ ಬಂದಿದ್ದು ಆ ಬಳಿಕ ಹೆಚ್ಚಳದ ಮೊತ್ತವನ್ನು ಈವರೆಗೂ ಪಾವತಿ ಮಾಡದೆ ಸಬೂಬು ಹೇಳಿಕೊಂಡು ಕಾಲಹರಣ ಮಾಡಲಾಗುತ್ತಿಲ್ಲ. ಈ ಹಿಂಬಾಕಿ ಪಾವತಿ ಜತೆಯಲ್ಲೇ ಈ ವರ್ಷ ಮತ್ತೆ ವೇತನ ಪರಿಷ್ಕರಿಸಬೇಕು ಈ ಎಲ್ಲವನ್ನು ಯಾವಾಗ ಮಾಡಲಾಗುತ್ತದೆ ಎಂಬ ಸ್ಪಷ್ಟತೆಯನ್ನು ಸರ್ಕಾರ ಕೊಡುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಡಾಬಾ, ಹೋಟೆಲ್‌ಗಳಲ್ಲಿ ವಾಹನ ನಿಲ್ಲಿಸುವ ಪದ್ಧತಿ ಸ್ಥಗಿತಗೊಳಿಸಿ, ಉತ್ತಮ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಶಕ್ತಿ ಯೋಜನೆಯಿಂದ ನಿಗಮಕ್ಕೆ ಶಕ್ತಿ ಬಂದಿದೆ’ ಎಂದು ಸಚಿವರು, ಅಧಿಕಾರಿಗಳು ಹೇಳುತ್ತಿದ್ದಾರೆ. ಇನ್ನೊಂದೆಡೆ ನಿಗಮಗಳಿಗೆ ಸರ್ಕಾರವು ಶಕ್ತಿ ಯೋಜನೆಯಡಿ ₹ 1,400 ಕೋಟಿ ಬಾಕಿ ನೀಡಬೇಕಿದೆ ಎಂದು ಅದೇ ಸಚಿವರು, ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ನಿಗಮದ ನೌಕರರಿಗೆ ಯಾವುದೇ ಶಕ್ತಿ ಬಂದಿಲ್ಲ ಎಂದು ಟೀಕಿಸಿದರು.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಲ್ಲಿರುವ ಆಡಳಿತ ಸಿಬ್ಬಂದಿಗೆ ಕರ್ತವ್ಯದ ಸಮಯವನ್ನು ಏಕರೂಪವಾಗಿ ನಿಗದಿಪಡಿಸಬೇಕು. ಸಾರಿಗೆ ನಿಗಮಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಿಲ್ಲಬೇಕು. ಮಹಿಳಾ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಎಚ್.ಎಲ್.ವಿಶ್ವ ನಾಥ್, ಪ್ರಧಾನ ಕಾರ್ಯದರ್ಶಿ ಜಿ.ಎಸ್. ಮಹದೇವಯ್ಯ, ಪದಾಧಿಕಾರಿಗಳು ನಿವೃತ್ತ ನೌಕರರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ