NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ

ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಮೇ 15, 2026ರ ಮಧ್ಯಾಹ್ನ 3ಗಂಟೆಗೆ ಏರ್ಪಡಿಸಿರುವ ಪೂರ್ವಭಾವಿ ಸಭೆಯಲ್ಲಿ ನಿವೃತ್ತ ನೌಕರರು ಭಾಗವಹಿಸುವಂತೆ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಕರೆ ನೀಡಿದ್ದಾರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಸಂಸ್ಥೆಯ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20, 2026 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘವು ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಜಂಟಿ ಕ್ರಿಯಾ ಸಮಿತಿ, ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಪೂರ್ವಭಾವಿಯಾಗಿ, ಕಾರ್ಮಿಕ ಮುಖಂಡರು ರಾಜ್ಯಾದ್ಯಂತ ಪ್ರವಾಸ ಮಾಡಿ, ರಾಜ್ಯ ಸರ್ಕಾರವು ಏಕ ಪಕ್ಷಿಯವಾಗಿ ಶೇ.12.5 ರಷ್ಟು ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ನೌಕರರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಇನ್ನು ಅದರಂತೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಮೇ 15, 2026ರ ಮಧ್ಯಾಹ್ನ 3ಗಂಟೆಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಕಾರ್ಮಿಕ ಮುಖಂಡರು ಹೋರಾಟದ ಮುಂದಿನ ರೂಪುರೇಷೆ ಬಗ್ಗೆ ಸಲಹೆ ಹಾಗೂ ಸೂಚನೆಗಳನ್ನು ನೀಡಲಿದ್ದಾರೆ. ಈ ಸಭೆಗೆ ಸಂಸ್ಥೆಯ ಹಾಲಿ ಸೇವೆಯಲ್ಲಿರುವ ಹಾಗೂ ನಿವೃತ್ತ ನೌಕರರನ್ನು ಸಹ ಆಹ್ವಾನಿಸಲಾಗಿದೆ.

ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘವು ಜಂಟಿ ಕ್ರಿಯಾ ಸಮಿತಿಯ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಜಂಟಿ ಕ್ರಿಯಾ ಸಮಿತಿಯು ನಡೆಸುವ ಪ್ರತಿಭಟನೆ/ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಕಳೆದ ಜನವರಿ 13, 2026 ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ನಾಲ್ಕೂ ಸಾರಿಗೆ ನಿಗಮಗಳ ಹಿತ ರಕ್ಷಣಾ ವೇದಿಕೆ ಬೃಹತ್ ಸಮಾವೇಶವನ್ನು ನಡೆಸಿದ್ದು, ಇಪಿಎಸ್ ನಿವೃತ್ತರು ಅಂದು ಭಾಗವಹಿಸಿದ್ದು ಸಹ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆ ಆಗಿದೆ ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ