NEWSನಮ್ಮಜಿಲ್ಲೆನಮ್ಮರಾಜ್ಯ

KSRTC & BMTC: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೂರಾರು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ನಿವೃತ್ತರ ಬೃಹತ್ ಪ್ರತಿಭಟನೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್ಆರ್‌ಟಿಸಿ ವತಿಯಿಂದ ಜರುಗಿತು.

ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರು ದೇಶಾದ್ಯಂತ ಇರುವ ಎಲ್ಲ ಇಪಿಎಸ್ ಪಿಂಚಣಿದಾರರಿಗೆ ಕರೆ ನೀಡಿದ್ದ ಮಾರ್ಚ್‌ 11ರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ, ಮನವಿ ಪತ್ರವನ್ನು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಿಗೆ ಸಲ್ಲಿಸಲಾಯಿತು.

ಪ್ರತಿಭಟಮನೆಯಲ್ಲಿ ಭಾಗವಹಿಸಿದ್ದ ನೂರಾರು ಮಂದಿ ನಿವೃತ್ತ ನೌಕರರು ಇಪಿಎಫ್ಒ ಅಧಿಕಾರಿಗಳ ವಿರುದ್ಧ ಕೂಗಿದ ಧಿಕ್ಕಾರದ ಘೋಷಣೆ ಕಚೇರಿ ಆವರಣದಲ್ಲಿ ಮಾರ್ಧನಿಸಿತು.

ಈ ವೇಳೆ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ ನರಗುಂದ ಮಾತನಾಡಿ, ಪಾರ್ಲಿಮೆಂಟ್ ಚುನಾವಣಾ ಪ್ರಕ್ರಿಯೆ ದಿನಾಂಕ ಇನ್ನೆರಡು ದಿನಗಳಲ್ಲಿ ಘೋಷಣೆಯಾಗಲಿದ್ದು, ಅದಕ್ಕೂ ಮುಂಚೆ ಕೇಂದ್ರ ಸರ್ಕಾರ, ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆಯಿದೆ. ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳ ಜತೆ ಮಹತ್ವದ ಮಾತುಕತೆ ನಡೆಯಲಿದ್ದು, ನಿರೀಕ್ಷಿತ ಫಲಿತಾಂಶ ಬರಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ಇಪಿಎಸ್ ನಿವೃತ್ತರು ನಿರಾಶರಾಗುವುದು ಬೇಡ, ನಮ್ಮ ಈ ಹೋರಾಟಕ್ಕೆ ಶೀಘ್ರದಲ್ಲೆ ಪ್ರತಿಫಲ ಸಿಗಲಿದೆ ಎಂದರು.

ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಮಾತನಾಡಿ, ಇದು ನಮ್ಮ ಕಟ್ಟ ಕಡೆಯ ಹೋರಾಟ, ಬೇಡಿಕೆ ಈಡೇರದೆ ಹೋದಲ್ಲಿ, ಈ ಚುನಾವಣೆಯಲ್ಲಿ ನಿವೃತ್ತರು ತೆಗೆದುಕೊಳ್ಳುವ ನಿರ್ಧಾರ ಕೇಂದ್ರ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂಬ ಎಚ್ಚರಿಕೆಯ ಸಂದೇಶ ನೀಡಿದರು.

ಅಧ್ಯಕ್ಷ ಶಂಕರ್ ಕುಮಾರ್ ಮಾತನಾಡಿ, ಹತ್ತಾರು ವರ್ಷಗಳಿಂದ ನಿವೃತ್ತರು ಸಂಕಷ್ಟಗಳನ್ನೇ ಅನುಭವಿಸುತ್ತಿದ್ದು, ಕೇರಳ ರಾಜ್ಯದ 69 ವರ್ಷದ ಶಿವರಾಮನ್ ಅವರಿಗೆ ಪಿಂಚಣಿ ನೀಡಿದೆ ಆತ್ಮಹತ್ಯೆಗೆ ದೂಡಿದ ಇಪಿಎಫ್ಒ ಅಧಿಕಾರಿಗಳ ವರ್ತನೆ ಖಂಡನೀಯ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿಡೋಲಪ್ಪನವರು, ಪದಾಧಿಕಾರಿಗಳಾದ ನಾಗರಾಜು ಹಾಗೂ ಮನೋಹರ್ ಸೇರಿದಂತೆ ನೂರಾರು ನಿವೃತ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ