Vijayapatha - ವಿಜಯಪಥ > NEWS > Crime > KSRTC ಬಸ್- ಬೈಕ್ ನಡುವೆ ಅಪಘಾತ- ಓರ್ವ ಸವಾರ ಸಾವು, ಇಬ್ಬರ ಸ್ಥಿತಿ ಗಂಭೀರ
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ನಡೆದಿದ್ದು, ಓರ್ವ ಸವಾರ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಮಧುಗಿರಿ ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮದ ನಿವಾಸಿ ಮಹೇಂದ್ರ (19) ಮೃತ ಯುವಕ. ಇದೇ ಗ್ರಾಮದ ನಿವಾಸಿಗಳಾದ ಚರಣ್ (19) ಹಾಗೂ ಅನಿಲ್ (19) ಗಂಭೀರ ಗಾಯಗೊಂಡಿದ್ದಾರೆ.
ಒಂದೇ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಸಾರಿಗೆ ಬಸ್‌ಗೆ ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಚರಣ್ ಹಾಗೂ ಅನಿಲ್ ಅವರನ್ನ ಕೂಡಲೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related
Deva
Leave a reply