CrimeNEWSನಮ್ಮಜಿಲ್ಲೆ

KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಮಗು ಸೇರಿ 8ಮಂದಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ತುರುವೇಕೆರೆ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಕಾರಿನಲ್ಲಿದ್ದ 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಾಯಸಂದ್ರ ಹೋಬಳಿಯ ಜೋಡುಘಟ್ಟ ಬಳಿ ನಡೆದಿದೆ.

ಮೈಸೂರಿನಿಂದ ತಿಪಟೂರಿಗೆ ಹೋಗುತ್ತಿದ್ದ ಕಾರು ಮತ್ತು ಹೊಸದುರ್ಗದಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್‌ ನಡುವೆ ಗುರುವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ.

ಅಪಘಾತದಿಂದಾಗಿ ಕಾರಿನಲ್ಲಿದ್ದ 8 ಮಂದಿಯೂ ಗಂಭೀರ ಗಾಯಗೊಂಡಿದ್ದು ಅವರೆಲ್ಲರನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಮಾಯಸಂದ್ರ ನಿವಾಸಿಗಳು ಸೇರಿ ಅಕ್ಕಪಕ್ಕದ ಗ್ರಾಮಸ್ಥರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿದಿನವೂ ಇಲ್ಲಿ ಸರಣಿ ಅಪಘಾತ ಸಂಭವಿಸಿ ಸಾವು ನೋವು ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಆಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರು ಪ್ರಯೋಜನವಾಗಿಲ್ಲ.

ಹೀಗಾಗಿ ಇಂದು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಹಾರ ಸೂಚಿಸುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಹಠ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮುಂದೆ ಈ ರೀತಿಯ ಅಪಘಾತವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ ಮೇಲೆ ಪ್ರತಿಭಟನೆ ವಾಪಸ್‌ ಪಡೆದಿದ್ದಾರೆ.

ಇನ್ನು ಕಳೆದ ಒಂದು ತಿಂಗಳಿನಿಂದಲೂ ಈ ಸ್ಥಳದಲ್ಲಿ ಸರಣಿ ಅಪಘಾತಗಳು ಆಗುತ್ತಿದ್ದು, ಈಗಾಗಲೇ ಹಲವಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಆದರೂ ಈ ಬಗ್ಗೆ ಗಮನಿಸದ ಅಧಿಕಾರಿಗಳ ಬೇಜವಾಬ್ದಾರಿ ನಡೆಯಿಂದ ನಮಗೆ ಬೇಸರವಾಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ