Vijayapatha - ವಿಜಯಪಥ > Blog > NEWS > Crime > KSRTC ಬಸ್- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ
ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯು ಮಂಡ್ಯದ ಮದ್ದೂರು ತಾಲೂಕಿನ ಸಾದೊಳಲು ಗ್ರಾಮ ಬಳಿ ನಡೆದಿದೆ.
ಸಾದೊಳಲು ಗ್ರಾಮ ಬಳಿ ಬರುವ ಮದ್ದೂರು-ಮಳವಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವಘಡ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಕೆಎಸ್ಆರ್ಟಿಸಿ ಬಸ್ ಮಳವಳ್ಳಿ ಕಡೆಯಿಂದ ಬರುತ್ತಿತ್ತು. ಮದ್ದೂರು ಕಡೆಯಿಂದ ಶಿಫ್ಟ್ ಕಾರು ಹೋಗುವಾಗ ದುರ್ಘಟನೆ ನಡೆದಿದೆ. ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
Related
Deva
Leave a reply