CrimeNEWSನಮ್ಮಜಿಲ್ಲೆ

ಸ್ಟೇರಿಂಗ್ ಕಟ್‌ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ KSRTC ಬಸ್‌- ತಪ್ಪಿದ ಭಾರಿ ಅವಘಡ

ವಿಜಯಪಥ ಸಮಗ್ರ ಸುದ್ದಿ

ಮಾಗಡಿ: ಸ್ಟೇರಿಂಗ್ ಕಟ್ ಆದ ಪರಿಣಾಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಮದ ಬಳಿ ಸಂಭವಿಸಿದೆ.

ಬಸ್ ಬೆಂಗಳೂರು – ಮಾಗಡಿ ಮಾರ್ಗವಾಗಿ ಹುಲಿಯೂರು ದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಸ್ಟೇರಿಂಗ್ ಕಟ್ ಆಗಿದೆ. ಇದರಿಂದ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಸದ್ಯ ವಿದ್ಯುತ್ ಕಡಿತವಾಗಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಚಾಲಕನ ಸಮಯ ಪ್ರಜ್ಞೆಯಿಂದ ಬಸ್‍ನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ ಚನ್ನಪ್ಟಣದ ಡಿಪೋಗೆ ಸರ್ವಿಸ್‍ಗೆ ಬಂದಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‍ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾಂಪೌಂಡ್‍ನ ಗೋಡೆ ಒಡೆದು ಬಂದಿದೆ. ಸರ್ವಿಸ್‍ಗೆ ಬಂದಿದ್ದ ಬಸ್‌ಅನ್ನು ಮೆಕ್ಯಾನಿಕ್ ಚಲಾಯಿಸುವಾಗ ಈ ಘಟನೆ ಸಂಭವಿಸಿದೆ.

ಈ ಎರಡು ಪ್ರತ್ಯೇಕ ಘಟನೆಗಳಲ್ಲೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸಾರಿಗೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ