ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿರುವ ಘಟನೆ ರಾಜಾಜಿನಗರದ ರಾಜಕುಮಾರ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ರಾಜಾಜಿನಗರದ ಖಾಸಗಿ ಕಂಪೆನಿಯ ಉದ್ಯೋಗಿ ರಮೇಶ್ (39) ಮೃತರು.
ತಡರಾತ್ರಿ ಕುಕ್ಕೆ ಸುಬ್ರಹ್ಮಣ್ಯದಿಂದ ನಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆ ಮೂಲಕ ಮೆಜೆಸ್ಟಿಕ್ ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ಬೈಕ್ನಲ್ಲಿ ಹೋಗುತ್ತಿದ್ದ ರಮೇಶ್, ಬಲತಿರುವು ಪಡೆದುಕೊಳ್ಳುವಾಗ ಬಸ್ ಡಿಕ್ಕಿ ಹೊಡೆದಿದೆ.
ಈ ವೇಳೆ ಕೆಳಗೆ ಬಿದ್ದ ಬೈಕ್ ಸವಾರ ರಮೇಶ್ ತಲೆಗೆ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರು ದಾಖಳಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.