CRIMENEWSನಮ್ಮರಾಜ್ಯ

ಬ್ರೇಕ್ ಫೇಲಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ KSRTC ಬಸ್- ಓರ್ವ ಮಹಿಳೆ ಕಾಲಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಗ್ನಲ್‌ನಲ್ಲಿ ಅಡ್ಡಬಂದ ಟೆಂಪೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ವೇಳೆ ಬ್ರೇಕ್ ಫೇಲ್‌ ಆಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಕಾಲಿಗೆ ಪೆಟ್ಟಾಗಿರುವ ಘಟನೆ ಬೆಂಗಳೂರಿನ SRS ಸಿಗ್ನಲ್ ಬಳಿ ಇಂದು ಮುಂಜಾನೆ ನಡೆದಿದೆ.

ಶನಿವಾರ ಮುಂಜಾನೆ 3:30ರಲ್ಲಿ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಬಸ್‌ನಲ್ಲಿ ಸುಮಾರು 42 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಒಬ್ಬ ಮಹಿಳೆ ಕಾಲಿಗೆ ಗಾಯವಾಗಿದೆ, ಇತ್ತ ಅವಘಡ ನಡೆದ ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದು, ಯಾವುದೆ ಪ್ರಾಣಹಾನಿಯಾಗಿಲ್ಲ.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ

ಇನ್ನು ಒಬ್ಬ ಮಹಿಳೆ ಕಾಲಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಳಿದಂತೆ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವಿವರಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ