CRIMENEWSನಮ್ಮಜಿಲ್ಲೆ

KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ.

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ನಗರದ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ನಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಅದೃಷ್ಟವಶಾತ್ ಈ ಅವಘಡ ಬಸ್ ನಿಲ್ದಾಣದೊಳಗೆ ಸಂಭವಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇದೇ ಘಟನೆ ರಸ್ತೆ ಮಧ್ಯೆ ನಡೆದಿದ್ದರೆ ಗಂಭೀರ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿತ್ತು.

ಸರ್ಕಾರಿ ಬಸ್‌ಗಳ ನಿರ್ವಹಣಾ ಸ್ಥಿತಿಗತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಬಸ್‌ಗಳ ತಾಂತ್ರಿಕ ವರಿಶೀಲನೆ ಮತ್ತು ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಅಲ್ಲದೆ ಡಿಪೋಗಳಿಂದ ಬಸ್‌ ಹೊರಗಡೆ ಬರುವಾಗಲೇ ಬಸ್‌ನಲ್ಲಿ ಇರುವ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು ಎಂಬ ಬಗ್ಗೆ ಡಿಪೋ ಡಿಎಂಗೆ ಗೊತ್ತಿಲ್ಲವೇ? ಇವರನ್ನು ಘಟಕ ವ್ಯವಸ್ಥಾಪಕರಾಗಿ ಸಂಬಳಕೊಟ್ಟು ಕೂರಿಸಿರುವುದು ಈ ರೀತಿಯ ಬಸ್‌ ಕಳಿಸಲಿ ಎಂಬುದಕ್ಕಾಗಿಯಾ ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗಂತು ಈರೀತಿಯ ಘಟನೆಗಳು ಮರುಕಳಿಸುತ್ತಲೇ ಇವೆ ಆದರೂ ಸಾರಿಗೆ ಸಚಿವರು ಏನು ಮಾಡುತ್ತಿದ್ದಾರೆ? ಸಂಬಂಧಪಟ್ಟ ಎಂಡಿಗಳು ಏನು ಮಾಡುತ್ತಿದ್ದಾರೆ? ವಿಭಾಗೀಯ ನಿಯಂತ್ರಣಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಾಗಿ ಇನ್ನಾದರೂ ಜನವರ ಜೀವಗಳ ಜತೆ ಆಟವಾಡುವುದನ್ನು ಬಿಟ್ಟು ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ರಸ್ತೆ ಮೇಲೆ ಬಿಡಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ