CRIMENEWSನಮ್ಮಜಿಲ್ಲೆ

KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ – ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್ನಲ್ಲಿ ಮಾತನಾಡಿಕೊಂಡು ಚಾಲಕ ಬಸ್‌ ಓಡಿಸುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಈ ರೀತಿ ಬೇಜವಾಬ್ದಾರಿಯ ಚಾಲಕನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ದಾವಣಗೆರೆ ಘಟಕ 1ರ KA 51 F 0067 ಸೂಪರ್ ಪ್ಲಸ್ ಎಲೆಕ್ಟ್ರಿಕ್ ಎ/ಸಿ ಬಸ್ಇದಾಗಿದ್ದು, ಗುರುವಾರ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಮೊಬೈಲ್ನಲ್ಲಿ ಮಾತನಾಡುತ್ತಲೇ ಚಾಲಕ ಸುನೀಲ್ ಕುಮಾರ್ ಬಸ್ ಚಾಲನೆ ಮಾಡಿದ್ದಾರೆ.

ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ವಿಡಿಯೋ ಸಿಕ್ಕಿದ್ದು, ಚಾಲಕನ ಈ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ನಿರ್ಲಕ್ಷ್ಯಕ್ಕೆ ಚಾಲಕನ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಈ ರೀತಿ ಮೊಬೈಲ್ಫೋನ್ನಲ್ಲಿ ಮಾತನಾಡಿಕೊಂಡು ಬಸ್ಓಡಿಸುವಾಗ ಏನಾದರೂ ಅವಘಡ ಸಂಭವಿಸಿದೆ ಬಸ್ನಲ್ಲಿರುವ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವ ಮಟ್ಟದಲ್ಲಿ ತೊಂದರೆ ಆಗುತ್ತದೆ ಎಂಬುವುದನ್ನು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವಾಗುತ್ತದೆ. ಹೀಗಾಗಿ ಆದಷ್ಟು ಫೋನ್ಗಳನ್ನು ಬಳಸದೆ ಚಾಲಕರು ತಮ್ಮ ಚಾಲನೆಯತ್ತ ಗಮನ ಹರಿಸಬೇಕಿದೆ.

ಚಾಲಕರನ್ನೇ ನಂಬಿ 50ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿ ಅರಾಮವಾಗಿ ಪ್ರಯಾಣಿಸುತ್ತಿರುತ್ತಾರೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಚಾಲಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರೆ ಯಾವುದೆ ತೊಂದರೆ ಆಗುವುದಿಲ್ಲ. ಹೀಗಾಗಿ ಚಾಲನಾ ಸಿಬ್ಬಂದಿಗಳು ತಮ್ಮ ಕರ್ತವ್ಯದ ಮೇಲೆ ಹೆಚ್ಚು ಗಮನಕೊಡಬೇಕಿದೆ.

Deva
the authorDeva

Leave a Reply

error: Content is protected !!
Latest news
ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ? KKRTC ನೌಕರರ 14 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಆದೇಶ ಯಾವುದೇ ಸಮಯದಲ್ಲಾದರೂ  ಹೊರಬೀಳಬಹುದು ವಾಯವ್ಯ ಸಾರಿಗೆ ಬಸ್‌- ಬೈಕ್‌ ನಡುವೆ ಡಿಕ್ಕಿ ಹೊತ್ತಿ ಉರಿದ ಬೈಕ್‌- ಸವಾರ ಸಜೀವ ದಹನ ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು