ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನ ಚಾಲಕರ ಸೈಡಿನ ಮುಂದಿನ ಭಾಗದ ಟಯರ್ ಬರ್ಸ್ಟ್‌ಆದ ಪರಿಣಾಮ ಸುಮಾರು 20 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಇಂದು (ಭಾನುವಾರ) ರಾತ್ರಿ ನಡೆದಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕತೊರೆಪಾಳ್ಯದ ಹತ್ತಿರ ಘಟನೆ ನಡೆದಿದ್ದು, ಈ ವೇಳೆ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ರಾಮನಗರ ವಿಭಾಗ ಮಾಗಡಿ ಘಟಕದ ಕೆಎಸ್ಆರ್‌ಟಿಸಿ ಬಸ್ 60 ರಿಂದ 70 ಜನ ಪ್ರಯಾಣಿಕರನ್ನು ಮಾಗಡಿಯಿಂದ ಬೆಂಗಳೂರಿಗೆ ಹೊತ್ತೊಯ್ಯುತ್ತಿದ್ದ ವೇಳೆ ಬಸ್ ಚಿಕ್ಕತೊರೆಪಾಳ್ಯದ ಬಳಿ ಸೇತುವೆಯಿಂದ ಸುಮಾರು 20 ಟಡಿ ಕಂದಕಕ್ಕೆ ಉರುಳಿ ಬಿದ್ದಿದೆ.
ಘಟನೆಯಿಂದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವಘಡದಿಂದ ಪ್ರಾಣಹಾನಿ ಆಗಿರುವ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ.
ಚಾಲಕ ಸೇರಿದಂತೆ ಹಲವು ಮಂದಿ ಗಾಯಾಳುಗಳನ್ನು ಮಾಗಡಿ ಸರ್ಕಾರಿ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿದ್ದೇವೆ.