CrimeNEWSನಮ್ಮರಾಜ್ಯ

KSRTC: ಸ್ಟೇರಿಂಗ್ ರಾಡ್ ಕಟ್ಟಾಗಿ ಭತ್ತದ ಗದ್ದೆಗೆ ಬಿದ್ದ ಬಸ್‌ – 50 ಜನರಿಗೆ ಗಾಯ, ಹತ್ತಾರು ಪ್ರಯಾಣಿಕರ ಕೈ ಕಾಲುಗಳ ಮುರಿತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಸ್ಟೇರಿಂಗ್ ರಾಡ್ ಕಟ್ಟಾದ ಪರಿಣಾಮ ಭತ್ತದಗದ್ದೆಗೆ ಬಸ್‌ ಬಿದ್ದಿರುವ ಘಟನೆ ಕೆ.ಆರ್. ನಗರದ ಶ್ರೀರಾಂಪುರ ಬಳಿ ನಡೆದಿದೆ.

ಸಾಲಿಗ್ರಾಮದಿಂದ ಮೈಸೂರಿಗೆ ಬಸ್ ತೆರಳುತ್ತಿತ್ತು. ಬಸ್ ಭತ್ತದ ಗದ್ದೆಗೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 50 ಮಂದಿ ಗಾಯಗೊಂಡಿದ್ದು, ಹಲವರಿಗೆ ಕೈ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ.

ಬಸ್‌ ಹಳ್ಳಕ್ಕೆ ಬಿದ್ದ ಕೂಡಲೇ ಇತ್ತ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಂದರೆ ಶಕ್ತಿಯೋಜನೆ ಜಾರಿಗೆ ಬಂದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿದ್ದು ಆ ಪ್ರಯಾಣಿಕರಿಗೆ ತಕ್ಕ ಬಸ್‌ಗಳನ್ನು ಬಿಡದ ಪರಿಣಾಮ ಇಂಥ ಘಟನೆಗಳು ಸಂಭವಿಸುತ್ತಿವೆ.

ಈ ಬಗ್ಗೆ ಗಮನ ಹರಿಸಬೇಕಾದ ಅಧಿಕಾರಿಗಳು ಬಸ್‌ಗಳ ದುರಸ್ತಿಗಾಗಿ ಡಿಪೋಗಳಿಗೆ ತಿಂಗಳಿಗೆ ನೀಡುತ್ತಿರುವ ಕೋಟಿ ಕೋಟಿ ರೂಪಾಯಿಗಳನ್ನು ನುಂಗಿ ನೀರುಕುಡಿಯುವ ಮೂಲಕ ಕೊಳ್ಳೆಹೊಡೆಯುತ್ತಿದ್ದಾರೆ ಎಂದು ಸಂಸ್ಥೆಯ ಕಚೇರಿ ಸಿಬ್ಬಂದಿಗಳು ಆರೋಪ ಮಾಡಿದ್ದಾರೆ.

ಇನ್ನು ಈ ರೀತಿ ಕೋಟಿ ಕೋಟಿ ರೂಪಾಯಿ ಬಸ್‌ ದುರಸ್ತಿಗೆ ನಿಗಮದಿಂದ ಬಿಡುಗಡೆಯಾದರೂ ಅದನ್ನು ಕೃಷ್ಣನ ಲೆಕ್ಕಕ್ಕೆ ಹಾಕುವ ಮೂಲಕ ರಾಮನ ಲೆಕ್ಕ ತೋರಿಸಿ ಭ್ರಷ್ಟಾಚಾರದಲ್ಲಿ ಬಹುತೇಕ ಅಧಿಕಾರಿಗಳು ಮುಳುಗಿದ್ದು ಈ ಬಗ್ಗೆ ಸಾರಿಗೆ ಸಚಿವರು ಕ್ರಮ ತೆಗೆದುಕೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖವಾಗಿ ಬಸ್‌ ಸ್ಟೇರಿಂಗ್ ರಾಡ್ ಕಟ್ಟಾಗಿರುವುದಕ್ಕೆ ಚಾಲಕರಿಗೆ ಮೆಮೋ ಕೊಟ್ಟು ಬಳಿಕ ಬಸ್‌ ಸ್ಟೇರಿಂಗ್ ರಾಡ್‌ಗೆ ತಗಲು ಬೆಲೆಯನ್ನು ಚಾಲಕರಿಂದ ವಸೂಲಿ ಮಾಡುವುದಕ್ಕೂ ಈ ಭ್ರಷ್ಟ ಅಧಿಕಾರಿಗಳು ಮುಂದಾಗುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಕೂಡಲೇ ಎಂಡಿ ಅವರು ಈ ಬಗ್ಗೆ ಗಮನಹರಿಸಿ ಚಾಲಕನ ಮೇಲೆ ಹಾಕುವ ದಂಡವನ್ನು ತಪ್ಪಿಸಬೇಕು ಎಂದು ಸಂಸ್ಥೆಯ ಸ್ಟೋರ್‌ನಲ್ಲಿ ಕರ್ತವ್ಯ ನಿವರ್ಹಿಸುವ ಹಲವು ಸಿಬ್ಬಂದಿಗಳು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ