CRIMENEWSನಮ್ಮರಾಜ್ಯ

KSRTC: ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ – ಚಾಲಕನ ಎರಡೂ ಕಾಲುಗಳ ಮೂಳೆ ಮುರಿತ,10ಕ್ಕೂ ಹೆಚ್ಚು ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಚಾಲಕನ ಎರಡು ಕಾಲುಗಳು ಮುರಿದಿರುವ ಘಟನೆ ಅರಸೀಕೆರೆಯ ಗೀಜಿಹಳ್ಳಿ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಚಾಲಕ ಸೇರಿ ಐವರ ಸ್ಥಿತಿ ಗಂಭಿರವಾಗಿದೆ. ಪುತ್ತೂರು ವಿಭಾಗದ ಮಡಿಕೇರಿ ಘಟಕದ ಬಸ್ ಅರಸೀಕೆರೆಯಿಂದ ಹಾಸನ್‌ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‍ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜುಗಿದ್ದು, ಚಾಲಕನ ಕಾಲು ಬಸ್‌ಗೆ ಸಿಲುಕಿಕೊಂಡಿದ್ದವು. ಈ ವೇಳೆ ಆ ಕಾಲುಗಳನ್ನು ಸುರಕ್ಷಿತವಾಗಿ ಹೊರತೆಗೆಯಲು ಅಲ್ಲಿದ್ದ ಜನರು ಭಾರಿ ಶ್ರಮಪಟ್ಟರು.

ಇನ್ನು ಚಾಲಕ ಸೇರಿದಂತೆ ಎಲ್ಲ ಗಾಯಾಳುಗಳಿಗೆ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇತ್ತ ಸುದ್ದಿ ತಿಳಿದು ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೆಸಿಬಿ ಬಳಸಿ ಬಸ್‍ನ್ನು ತೆರವುಗೊಳಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ