Search By Date & Category

CrimeNEWSನಮ್ಮಜಿಲ್ಲೆ

ಕೆಎಸ್‌ಆರ್‌ಟಿಸಿ ಬಸ್‌- ಮಿನಿ ಬಸ್ ನಡುವೆ ಮುಖಾಮುಖಿ: 12 ವಿದ್ಯಾರ್ಥಿಗಳಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾಲೇಜಿನ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.

ಮಿನಿ ಬಸ್‌ನಲ್ಲಿ ಚನ್ನರಾಯಪಟ್ಟಣದ ಕಾಲೇಜೊಂದರ ವಿದ್ಯಾರ್ಥಿಗಳು ಪ್ರವಾಸ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಎದುರಿನಲ್ಲಿ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಿನಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಎಲ್ಲ ವಿದ್ಯಾರ್ಥಿಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply

error: Content is protected !!