Vijayapatha - ವಿಜಯಪಥ > Blog > NEWS > Crime > KSRTC: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತ
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾದ ಘಟನೆ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ನಡೆದಿದೆ.
ಅಪಘಾತದ ವೇಳೆ ಬಸ್‌ನಲ್ಲಿ 30 ಜನ ಪ್ರಯಾಣಿಕರಿದ್ದರು. ಅವರಲ್ಲಿ ಶಿಕ್ಷಕರೇ ಹೆಚ್ಚು ಮಂದಿ ಇದ್ದರು. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 6-7 ಮಂದಿಗೆ ಸಣ್ಣಪುಟ್ಟಗಾಯಗಳಾಗಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸ್ಥಳದಲ್ಲಿರುವರು ಮಾಹಿತಿ ನೀಡಿದ್ದಾರೆ.
ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು, ಕಿಟಕಿ ಬಳಿ ಕುಳಿತಿದ್ದ6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
Related
Deva
Leave a reply