CrimeNEWSನಮ್ಮಜಿಲ್ಲೆ

KSRTC: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಹಲವು ವಿದ್ಯಾರ್ಥಿಗಳಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹಿರಿಯೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಬಳಾಪುರ ತಾಂಡಾ ಬಳಿ ಇಂದು ಸೋಮವಾರ ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ.

ಬಸ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು. ಹಿರಿಯೂರು ಕಡೆ ಬರುವಾಗ ಓಬಳಾಪುರ ತಾಂಡಾ ಬಳಿ ಅವಘಡ ಸಂಭವಿಸಿದ್ದರೂ ಕೂಡ ಸದ್ಯ ಯಾವುದೇ ಪ್ರಾಣಾಪಾಯ ಸಂಬವಿಸಿಲ್ಲ. ಆದರೆ, ಕೆಲವು ವಿದ್ಯಾರ್ಥಿಗಳ ಕೈ, ಕಾಲು, ಕಣ್ಣು ಇನ್ನಿತರ ಭಾಗಗಳಿಗೆ ಗಾಯಗಳಾಗಿವೆ.

ಈ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳೀಯ ವಾಹನ ಹಾಗೂ ಅಂಬುಲೆನ್ಸ್‌ಗಳ ಮೂಲಕ ಸಮೀಪದ ಸ್ಥಳೀಯ ಮತ್ತು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು