NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು

ವಿಜಯಪಥ ಸಮಗ್ರ ಸುದ್ದಿ

ಗುಬ್ಬಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮುಡಿ ಕಟ್ಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುಬ್ಬಿ ಬಳಿಯ ಮೂಕನಹಳ್ಳಿ ಪಟ್ಟಣ ಗೇಟ್‌ ಬಳಿ ನಡೆದಿದೆ.

ಇಂದು ಬಳಗ್ಗೆ ಸುಮಾರು 11.40ರಲ್ಲು ಅವಘಡ ಸಂಭವಿಸಿದ್ದು, ಈ ಅಪಘಾತದಿಂದ ಚಾಲಕ ಸುರೇಶ್‌ ಸೇರಿದಂತೆ ಹವಾರು ಮಂದಿ ಪ್ರಯಾಭಿಕರು ಗಾಯಗೊಂಡಿದ್ದಾರೆ. ಬಸ್‌ ಹೊಸದುರ್ಗದಿಂದ ಬೆಂಗಳೂರಿಗೆ ಬರುತ್ತಿತ್ತು.

ಈ ವೇಳೆ ಮೂಕನಹಳ್ಳಿ ಪಟ್ಟಣ ಗೇಟ್‌ ಬಳಿ ತುಮಕೂರು ವಿಭಾಗದ ತಿಪಟೂರು ಘಟಕದ ಈ ಬಸ್‌ ಬರುತ್ತಿದ್ದಂತೆ ಮುಂದಿನ ಭಾಗದ ಮುಡಿ ಕಟ್ಟಾಗಿದೆ ಪರಿಣಾಮ ಚಾಲಕನ ನಿಯಂತ್ರಕಳೆದುಕೊಂಡಿದ್ದು, ಪಲ್ಟಿಹೊಡೆದಿದೆ.

ಬಸ್‌ನಲ್ಲಿ ಸುಮಾರು 74 ಜನ ಪ್ರಯಾಣಿಕರಿದ್ದು, ಒಬ್ಬರು ತೀವ್ರಗಾಯಗೊಂಡಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಗುಬ್ಬಿ ಪೊಲೀಸರು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿದ್ದಾರೆ.

ಇನ್ನು ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

ಇತ್ತೀಚೆಗೆ ಸಾರಿಗೆ ಸಂಸ್ಥೆಯ ಬಹುತೇಕ ಬಸ್‌ಗಳು ಗುಜರಿಗೆ ಸೇರಬೇಕಿದ್ದು ಅಂಥ ಬಸ್‌ಗಳನ್ನು ರೂಟ್‌ ಮೇಲೆ ಕಳಿಸುತ್ತಿರುವುದರಿಂದ ಈ ರೀತಿಯ ಅಪಘಾತಗಳು ಸಂಭವಿಸುತ್ತಿವೆ. ಅಲ್ಲದೆ ಬಸ್‌ಗಳ ಬಿಡಿ ಭಾಗಗಳನ್ನು ಸರಿಯಾಗಿ ಪೂರೈಸದೆ ಹಾಳಾಗಿರುವ ಬಸ್‌ಗಳನ್ನು ದುರಸ್ತಿ ಮಾಡದೆ ಇರುವುದು ಇಂಥ ಪ್ರಕರಣಕ್ಕೆ ಸಾಕ್ಷಿಯಾಗುತ್ತಿವೆ.

ಈ ರೀತಿ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವ ಸಾರಿಗೆ ನಿಗಮದ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟ ಸಚಿವರು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಅಲ್ಲದೆ ಬಸ್‌ ಫೀಟ್‌ನೆಸ್‌ ನೋಡದೆ ರಸ್ತೆಗಿಳಿಸುವ ಘಟಕ ವ್ಯವಸ್ಥಾಪಕರ ವಿರುದ್ಧ ಮೊದಲು ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ಅಧಿಕಾರಿಗಳು ತಮ್ಮ ತಪ್ಪನ್ನು ಮುಚ್ಚಿಹಾಕಲು ಚಾಲಕರ ವಿರುದ್ಧ ಮೇಲಧಿಕಾರಿಗಳಿಗೆ ವರದಿ ನೀಡುತ್ತಾರೆ. ಇದು ಮೊದಲು ತಪ್ಪಬೇಕು ಎಂದು ಸಾರಿಗೆ ಮುಖಂಡರು ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ: ಸಚಿವ ಮುನಿಯಪ್ಪ ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಟ್ಟು ಪರಿಸರ ಜಾಗೃತಿ ವಿದೇಶದಲ್ಲಿ ಕನ್ನಡ ಕಲಿಕೆ: ‘ಕರ್ನಾಟಕ ಸಂಘ ಕತಾರ್’ನ ಅಧ್ಯಕ್ಷ ಸುಬ್ರಮಣ್ಯ ಅಭಯ KARNATAKA- ಸರ್ಕಾರಿ ನೌಕರರಿಗೆ ಇನ್ನು ಮುಂದೆ ಬಯೋಮೆಟ್ರಿಕ್‌ ಬದಲಿಗೆ AI ಜಿಪಿಎಸ್‌ ಆಧರಿತ ಹಾಜರಾತಿ ಕಡ್ಡಾಯ: ಸಿಎಸ್‌... ಸಚಿವ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ: ಸಿಎಂ ಡಿಕೆಶಿ ಕೊಟ್ಟ ಮಾತು ತಪ್ಪಿದ್ದಕ್ಕೆ ಈ ನಿರ್ಧಾರ ಎ... KSRTC ನಾಲ್ಕೂ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯಡಿ ಮೇ, ಜೂನ್‌ ತಿಂಗಳುಗಳ 860 ಕೋಟಿ ರೂ. ಅನುದಾನ ಬಿಡುಗಡೆ KKRTC: ಪ್ರತಿ ತಿಂಗಳು 1ರಂದೇ ವೇತನ ಆಗುತ್ತಿತ್ತು- ಈ ಬಾರಿ ಮೇ ತಿಂಗಳ ವೇತನ ಇನ್ನೂ ಆಗಿಲ್ಲ, ಗೊಂದಲದಲ್ಲಿ ನೌಕರರು! ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌: ಹೊರಬಿದ್ದ ಸರ್ಕಾರದ ಅಧಿಕೃತ ಆದೇಶ ಕೊಟ್ಟ ಮಾತು ತಪ್ಪಿದ ಸಿಎಂ ಡಿಕೆಶಿ: ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ! ಸರ್ಕಾರದ 2 ಸಾವಿರ ರೂ. ಪಡೆಯಲು ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್‌ ಕಡ್ಡಾಯ