KSRTC: ಎದುರು ವಾಹನಕ್ಕೆ ಜಾಗ ಬಿಡುವ ವೇಳೆ ಭತ್ತದ ಗದ್ದೆಗೆ ಪಲ್ಟಿ ಹೊಡೆದ ಬಸ್- 45ಕ್ಕೂ ಪ್ರಯಾಣಿಕರಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಾಲೂಕಿನ ಶಿವಳ್ಳಿ-ಹಾಡ್ಯ ನಡುವೆ ಭತ್ತದ ಗದ್ದೆಗೆ ಪಲ್ಟಿ ಹೊಡೆದ ಪರಿಣಾಮ 45ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದಾಗ ಮತ್ತೊಂದು ವಾಹನಕ್ಕೆ ಜಾಗ ಬಿಡುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ಕಳೇದುಕೊಂಡ ಬಸ್ ಭತ್ತದ ಗದ್ದೆಗೆ ಉರುಳಿ ಬಿದ್ದಿದೆ.
ಈ ವೇಳೆ ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಗಾಯಗೊಂಡ ಎಲ್ಲರನ್ನು ಸ್ಥಳೀಯರ ಸಹಕಾರದಿಂದ ಆಂಬುಲೆನ್ಸ್ ಮತ್ತು ಖಾಸಗಿ ವಾಹನಗಳ ಮೂಲಕ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿದೆ.
ಈ ವೇಳೇ ಸಣ್ಣಪುಟ್ಟ ಗಾಯಗೊಂಡಿದ್ದವರನ್ನು ಹೊರರೋಗಿಗಳಾಗಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...