CrimeNEWSನಮ್ಮರಾಜ್ಯ

KSRTC: ಬ್ರೇಕ್ ಫೇಲ್​ ಆಗಿ ಶಾಲೆಗೆ ನುಗ್ಗಿದ ಬಸ್‌: ಓರ್ವ ಮೃತ, ಹಲವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ ಬ್ರೇಕ್ ಫೇಲ್​ ಆಗಿ ಶಾಲೆಯೊಂದಕ್ಕೆ ನುಗ್ಗಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಬಾಗೆ ಬಳಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್​ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವಾಗ ಮಾರ್ಗಮಧ್ಯೆ ಬ್ರೇಕ್ ಫೇಲ್ ಆಗಿದೆ. ಹೀಗಾಗಿ ಬಾಗೆ ಬಳಿ ಇರುವ ಜೆಎಸ್ಎಸ್​ ಶಾಲೆಗೆ ಬಸ್​ ನುಗ್ಗಿಕೊಂಡು ಹಾಗೇ ಮುಂದೆ ಹೋಗಿದೆ. ಪರಿಣಾಮ ಬಸ್‌ನ ಮುಂಭಾಗದ ಕಿಟಕಿ ಬಳಿ ಕುಳಿತ್ತಿದ್ದ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಗ್ರಾಮದ ನಿವಾಸಿ ಅಮೃತ್‌ ರಾಜ್‌ (34) ಅಸುನೀಗಿದ್ದಾರೆ.

ಅಷ್ಟೇ ಅಲ್ಲದೆ ಈ ಅಪಘಾತದಿಂದ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅವಶ್ಯವಿರುವವರನ್ನು ದೊಡ್ಡಾಸ್ಪತ್ರೆಗೆ ಕಳುಹಿಸಲಾಗಿದೆ.

ಇಂದು ಭಾನುವಾರವಾಗಿದ್ದರಿಂದ ಶಾಲೆಗೆ ರಜೆ ಇತ್ತು. ಹೀಗಾಗಿ ಮಕ್ಕಳು ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇನ್ನು ಶಾಲೆಯ ಕಟ್ಟಡವು ಹಾನಿಗೊಳಗಾಗಿದೆ.

ಈ ಅವಘಢ ಸಂಬಂಧ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ