CrimeNEWSನಮ್ಮಜಿಲ್ಲೆ

KSRTC ಬಸ್‍ ಸ್ಟೇರಿಂಗ್‌ ಕಟ್‌- ಭತ್ತದ ಗದ್ದೆಗೆ ನುಗ್ಗಿದ ಬಸ್‌ : ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕೆಎಸ್‍ಆರ್‌ಟಿಸಿ ಬಸ್‍ನ ಸ್ಟೇರಿಂಗ್‌ ಕಟ್ ಆದ ಪರಿಣಾಮ ಬಸ್ ಭತ್ತದ ಗದ್ದೆಗೆ ನುಗ್ಗಿದ್ದು, ಸ್ವಲ್ಪದರಲ್ಲೇ ಬಾರಿ ಅನಾಹುತ ತಪ್ಪಿದಂತಾಗಿದೆ.

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಬಳಿ ಅವಘಡ ಸಂಭವಿಸಿದ್ದು, ಅರಸೀಕೆರೆಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್‍ನ ಸ್ಟೇರಿಂಗ್‌ ಕಟ್ಟಾಗಿ ರಸ್ತೆಯ ಪಕ್ಕದ ಭತ್ತದ ಗದ್ದೆಗೆ ಬಸ್ ನುಗ್ಗಿ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ 11 ಕೆವಿ ವಿದ್ಯುತ್ ಕಂಬ ಅರ್ಧಕ್ಕೆ ಮುರಿದು ಬಸ್‌ ಮೇಲೆ ಬೀಳದೆ ಬಾಗಿ ನಿಂತಿದೆ.

ಒಂದು ವೇಳೆ ಬಸ್‌ ಮೇಲೆ ಬಿದ್ದಿದ್ದರೆ ವಿದ್ಯುತ್‌ ಪ್ರವಹಿಸಿ ಏನು ಅನಾಹುತ ಸಂಭವಿಸುತ್ತಿತ್ತೊ ಊಹಿಸಿಕೊಳ್ಳುವುದಕ್ಕೂ ಭಯವಾಗುತ್ತಿದೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಬಸ್‍ನ ವೇಗ ಕಡಿಮೆಯಾಗಿದೆ. ಹೀಗಾಗಿ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಘಟನೆ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ