NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ ಟಿಕೆಟ್‌ ದರ ಹೆಚ್ಚಳ- ಸ್ಪಷ್ಟನೆ ಕೊಟ್ಟ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ಬಸ್​​ಗಳ ಟಿಕೆಟ್ ದರ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಆದರೆ, ಈ ವಿಚಾರವಾಗಿ ಸಾರಿಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಪ್ರಯಾಣಿಕರ ವಿರೋಧದ ನಡುವೆಯೂ ನಮ್ಮ ಮೆಟ್ರೋ ಟಿಕೆಟ್‌ ದರ ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಅಸ್ತು ಎಂದಿದೆ. ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಿರುವಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಟಿಕೆಟ್‌ ದರ ಹೆಚ್ಚಳವಾಗುತ್ತಿದೆ ಎಂಬ ವಿಷಯದಿಂದ ಜನರು ಸಿಟ್ಟಾಗಿದ್ದರು. ಅದಕ್ಕೆ ಸಾರಿಗೆ ಅಧಿಕಾರಿಗಳು ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಪ್ರಕಟಣೆಯಲ್ಲಿ ಏನಿದೆ?: ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣ ವ್ಯತ್ಯಾಸದ ಬಗ್ಗೆ ವರದಿಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಎಸ್ಆರ್​​ಟಿಸಿ ನಿಗಮ, ಮೈಸೂರು ಮತ್ತು ಬೆಂಗಳೂರು ನಡುವಿನ ಐರಾವತ ಕ್ಲಬ್ ಕ್ಲಾಸ್ ದರ 430 ರೂ. ಆಗಿರುತ್ತದೆ ಎಂದು ತಿಳಿಸಿದೆ.

ಪ್ರಯಾಣದ ಸಮಯದಲ್ಲಿ ವಿತರಣೆಯಾಗಿರುವ 431 ರೂ. ಮೌಲ್ಯದ ಟಿಕೆಟ್ ನಿರ್ವಾಹಕರು ಮಾರ್ಗಕ್ಕೆ ತೆರಳಿ ಕಾರ್ಯಾಚರಣೆ ಮಾಡುವಾಗ ಈ ಮಾರ್ಗಕ್ಕೆ ಇಟಿಎಂ ಯಂತ್ರದಲ್ಲಿ ಆಯ್ಕೆ ಮಾಡಬೇಕಾದ ರೂಟ್ ನಂಬರ್ 94ರ ಬದಲು ಇಟಿಎಂ ಯಂತ್ರದ ರೂಟ್ ನಂಬರ್ 908ನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡು ಕಾರ್ಯಾಚರಣೆ ಮಾಡಿರುವುದರಿಂದ ಈ ರೀತಿ ಆಗಿದ್ದು, ಇದನ್ನು ಸರಿಪಡಿಸಲಾಗಿದೆ. ಯಾವುದೇ ದರ ಏರಿಕೆ ಆಗಿಲ್ಲ ಎಂದು ಕೆಎಸ್ಆರ್​​ಟಿಸಿ ನಿಗಮ ಸ್ಪಷ್ಟನೆ ನೀಡಿದೆ.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಇತ್ತೀಚೆಗೆ ಸಿಡಿದೆದ್ದಿದ್ದರು. ಆ ಮೂಲಕ ‘ಬೆಂಗಳೂರು ಚಲೋ’ಗೆ ಕರೆ ನೀಡಿದ್ದರು. ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಫ್ರೀಡಂ ಪಾರ್ಕ್​​ನಲ್ಲಿ ನಾಲ್ಕೂ ನಿಗಮಗಳಿಂದ ಪ್ರತಿಭಟನೆ ನಡೆಯಬೇಕಿತ್ತು. ಆದರೆ ಅನಂತ್ ಸುಬ್ಬರಾವ್​ ಅವರ ನಿಧನ ಹಿನ್ನೆಲೆ ಬೆಂಗಳೂರು ಚಲೋ ಅನ್ನು ಮುಂದೂಡಲಾಗಿದೆ.

ಇನ್ನು ಇದೇ 19 ರಂದು ಪ್ರತಿಭಟನಾ ಧರಣಿ ಹಮ್ಮಿಕೊಳ್ಳುವುದಾಗಿ ಕೆಲ ಸಂಘಟನೆಗಳು ತಿಳಿಸಿವೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!