CRIMENEWSನಮ್ಮಜಿಲ್ಲೆ

KSRTC ಬಸ್-ಟಿಪ್ಪರ್ Accident ಪ್ರಕರಣ: ಮೂವರ ವಿರುದ್ಧ FIR, ಇಬ್ಬರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಕುಂದಾಪುರ: ತಲ್ಲೂರು ಮೂಲಕ ನೇರಳಕಟ್ಟೆ-ಆಜ್ರಿ-ಸಿದ್ದಾಪುರ ರಸ್ತೆಯ ಶೆಟ್ರಕಟ್ಟೆ ಎಂಬಲ್ಲಿ ಸೋಮವಾರ ಟಿಪ್ಪರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಬಂಧಿಸಲಾಗಿದೆ.

ಟಿಪ್ಪರ್ ಮಾಲೀಕ ಶ್ರೀಧರ್ ಮತ್ತು ಟಿಪ್ಪರ್ ಚಾಲಕ ರಾಘವೇಂದ್ರ ಬಂಧಿತ ಆರೋಪಿಗಳು. ಕೆಂಪು ಮಣ್ಣು ಜಾಗದ ಮಾಲೀಕ ಮಂಜುನಾಥ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

ಕೆಎಸ್‌ಆರ್‌ಟಿಸಿ ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಿಂದ ಬಸ್ಸಿನಲ್ಲಿದ್ದ 29 ಮಂದಿ ಪ್ರಯಾಣಿಕರ ಪೈಕಿ 18 ಮಂದಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಸಹಿತ ಮೂರು ಮಂದಿ ತೀವ್ರ ಗಾಯ ಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿKSRTC ಬಸ್‌ ಮಣ್ಣು ಸಾಗಿಸುತ್ತಿದ್ದ ಲಾರಿ ನಡುವೆ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸೇರಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರಗಾಯ

ಈ ಸಂಬಂಧ ಕೆಎಸ್‌ಆರ್‌ಟಿಸಿ ಕುಂದಾಪುರ ಘಟಕದ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಕುಂದಾಪುರ ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.

Megha
the authorMegha

Leave a Reply

error: Content is protected !!