NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಆ.4ರಿಂದ ಮುಂದಿನ ಆದೇಶದವರೆಗೂ ಅಧಿಕಾರಿ/ ನೌಕರರ ರಜೆ ಮಂಜೂರಾತಿ ರದ್ದುಪಡಿಸಿ- CPM ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಚ್.ಆ‌ರ್.ಎಂ.ಎಸ್.ತಂತ್ರಾಂಶದಲ್ಲಿ ಆ.4ರಿಂದ ಮುಂದಿನ ಆದೇಶದವರೆಗೆ ಅಧಿಕಾರಿ/ ನೌಕರರ ರಜೆ ಮಂಜೂರಾತಿಯನ್ನು ರದ್ದುಪಡಿಸಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆ.2ರಂದು ಈ ಸಂಬಂಧ ಆದೇಶ ಹೊರಡಿಸಿದ್ದು, ಅದರಲ್ಲಿ ನಿಗಮಗಳ ಕಾರ್ಮಿಕ ಸಂಘಟನೆಗಳು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದೆಂದು ಆದೇಶಿಸಿದ್ದಾರೆ.

ಆದ್ದರಿಂದ, ಎಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಅಧಿಕಾರಿ/ ನೌಕರರು ರಜೆ ಪಡೆಯುವ ಅವಕಾಶವನ್ನು (Auto approval) ಆ.4ರಿಂದ ಮುಂದಿನ ಆದೇಶವರೆಗೆ ತಡೆಹಿಡಿಯಲಾಗಿದೆ.

ಮುಂದುವರಿದು, ಉಲ್ಲೇಖ-1ರ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ವಾರದ ರಜೆ ಮತ್ತು ದೀರ್ಘಾವಧಿ ರಜೆಯಲ್ಲಿರುವ ನೌಕರರನ್ನು ಹೊರತುಪಡಿಸಿ ಎಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಈಗಾಗಲೇ ಅಧಿಕಾರಿ/ ನೌಕರರು ರಜೆ ಪಡೆದಿರುವುದನ್ನು ಆ.4ರಿಂದ ಮುಂದಿನ ಆದೇಶದವರೆಗೆ ರದ್ದುಪಸಲು ಕ್ರಮ ಕೈಗೊಳ್ಳುವಂತೆ ತಿಳಿಸಲು ಸೂಕ್ತಾಧಿಕಾರಿಗಳಿಂದ ನಿರ್ದೇಶಿಸಲ್ಪಟ್ಟಿರುತ್ತೇನೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

ಎಚ್.ಆ‌ರ್.ಎಂ.ಎಸ್.ತಂತ್ರಾಂಶದ PDF ಫೈಲ್‌: HRMS Leaves Cancel

 

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ