NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು – ಕಿಮೀ ವರೆಗೆ ಟ್ರಾಫಿಕ್ ಜಾಮ್

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್​ಗಳು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ಚಾರ್ಮಾಡಿ ಘಾಟ್​ನ ಅಣ್ಣಪ್ಪಸ್ವಾಮಿ ದೇವಾಲಯದ ಬಳಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಟ್ರಾಫಿಕ್ ಜಾಮ್‌ನಿಂದಾಗಿ ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ಗಂಟೆಗಂಟೆಲೇ ತೊಂದರೆ ಅನುಭವಿಸುವಂತಾಗಿದೆ. ಅಲ್ಲದೆ ಕಿಲೋ ಮೀಟರ್ ಗಟ್ಟಲೆ ವಾಹನಹಳು ನಿಂತಿದ್ದು, ಹಿಂದಕ್ಕೂ ಹೋಗಲಾಗದೆ ಮುಂದೆಯೂ ಚಲಿಸಲಾಗದೆ ಸಮಸ್ಯೆಗೆ ಸಿಲುಕಿದ್ದಾರೆ ಜನರು.

ಇನ್ನು ಮಳೆಯು ಬೀಡುತ್ತಿದ್ದು, ಈ ಮಳೆಯಲ್ಲಿ ಯಾವ ಕಡೆ ಹೋಗಬೇಕು ಎನ್ನುವುದು ಗೊತ್ತಾಗದೆ ಪರದಾಡುತ್ತಿದ್ದಾರೆ. ಇದು ಚಿಕ್ಕಮಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿರುವುದರಿಂದ ವಾಹನಗಳ ಓಡಾಟ ಹೆಚ್ಚಾಗಿರುತ್ತದೆ ಹೀಗಾಗಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಿವೆ.

ಇತ್ತ ನಿರಂತರ ಮಳೆಯಿಂದ ಪ್ರವಾಸಿಗರು ಪ್ರಯಾಣಿಕರು ಪರದಾಡಿದ್ದು ಇಂತಹ ಟ್ರಾಫಿಕ್​ನಲ್ಲಿ ಮಂಗಳೂರಿಗೆ ಹೋಗುತ್ತಿದ್ದ ಆಂಬುಲೆನ್ಸ್​ವೊಂದು ಕೂಡ ಸಿಲುಕಿಕೊಂಡಿದ್ದು ಒಳಗಿದ್ದ ರೋಗಿಯ ಜೀವ ಉಳಿಸಲು ಆಂಬುಲೆನ್ಸ್‌ ಸಿಬ್ಬಂದಿ ಹರಸಹಾಸ ಪಡುತ್ತಿದ್ದಾರೆ. ಇತ್ತ ಟ್ರಾಫಿಕ್ ಜಾಮ್‌ ಕ್ಲಿಯರ್ ಮಾಡಲು ಬಣಕಲ್ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ