CRIMENEWSನಮ್ಮಜಿಲ್ಲೆ

KSRTC ಚಿತ್ರದುರ್ಗ ವಿಭಾಗ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಚಾಲಕ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿತ್ರದುರ್ಗ ವಿಭಾಗದ ಚಳ್ಳಕೆರೆ ಘಟಕದ ಚಾಲನಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಳ್ಳಕೆರೆ ಘಟಕದ ಚಾಲಕ ಪರಮೇಶ (36) ಘಟಕದ ಪಕ್ಕದಲ್ಲಿರುವ ತೋಪಿನ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ವಿಷಯದಲ್ಲಿ ಮನನೊಂದು ಖಿನ್ನತೆ ಒಳಗಾಗಿ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇತ್ತ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿಷಯ ತಿಳಿದ ಪತ್ನಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದ್ದು, ಮೃತ ಚಾಲಕನಿಗೆ ಒಂದೂವರೆ ವರ್ಷದ ಮಗುವಿದೆ ಎಂದು ತಿಳಿದು ಬಂದಿದೆ.

ಇನ್ನು ಚಾಲಕ ಪರಮೇಶ ತಾನಾಯಿತು ತನ್ನ ಕೆಲಸವಾಯಿತು ಎಂಬ ರೀತಿ ಇದ್ದನು. ಆದರೆ, ಈ ರೀತಿ ಆತ್ಮಹತ್ಯೆ ಮಾಡಿಕೊಳ್ಳುವಂತ ಸ್ಥಿತಿಗೆ ಏಕೆ ತಲುಪಿದನೋ ಗೊತ್ತಾಗುತ್ತಿಲ್ಲ ಎಂದು ಸಹೋದ್ಯೋಗಿಗಳು ತಿಳಿಸಿದ್ದಾರೆ.

ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಚಳ್ಳಕೆರೆ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಬಳಿಕ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Advertisement
Megha
the authorMegha

Leave a Reply

error: Content is protected !!