Please assign a menu to the primary menu location under menu

NEWSಆರೋಗ್ಯನಮ್ಮರಾಜ್ಯ

KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ನೌಕರರ ಹಲವಾರು ವರ್ಷಗಳ ಕನಸು ಇಂದು ಅಧಿಕೃತವಾಗಿ ನನಸಾಗಿದ್ದು, ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್​​)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಇಂದು ಬೆಳಗ್ಗೆ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಮಾಡಿರುವುದು ದೇಶದಲ್ಲೇ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಈ ಮೂಲಕ ಪಾತ್ರವಾಗಿದೆ.

ನೌಕರರಿಗೆ ಆರೋಗ್ಯ ಕಾರ್ಡ್: ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್​ಆರ್​ಟಿಸಿ ಅಧಿಕಾರಿಗಳು/ನೌಕರರು ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಸಂಸ್ಥೆ ಕೊಟ್ಟಿರುವ ಆರೋಗ್ಯ ಕಾರ್ಡ್ ತೋರಿಸುವ ಮೂಲಕ ಚಿಕಿತ್ಸೆ ಪಡೆಯಬಹುದಾಗಿದೆ.

ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್​ಆರ್​ಟಿಸಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ. ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಆರೋಗ್ಯ ಕಾರ್ಡ್​ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಈ ಸೌಲಭ್ಯ ಪಡೆಯಲು ಕೆಎಸ್ಆರ್ಟಿಸಿ ನೌಕರರು ಪ್ರತಿ ತಿಂಗಳು 650 ರೂಪಾಯಿ ಪಾವತಿ ಮಾಡಬೇಕು. ಕೆಎಸ್ಆರ್​​ಟಿಸಿ ನಿಗಮ 600 ರೂಪಾಯಿ ಪಾವತಿ ಮಾಡುತ್ತದೆ. ಇದರಿಂದ ವರ್ಷಕ್ಕೆ ಒಟ್ಟು 46 ಕೋಟಿ ರೂಪಾಯಿ ಸಂಗ್ರಹವಾಗುತ್ತದೆ ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಹೇಳಿದರು.

ಇಂದು ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ದೊರೆಯುತ್ತಿದ್ದು, ಮುಂದಿನ ಮಾರ್ಚ್‌ ವೇಳೆಗೆ ಉಳಿದ ಬಿಎಂಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯುಕೆಆರ್‌ಟಿಸಿ ನಿಗಮಗಳ ಅಧಿಕಾರಿಗಳು/ನೌಕರರಿಗೂ ಈ ಸೌಲಭ್ಯ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇನ್ನು ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಪಡೆಯುವುದಕ್ಕೆ ಮೊದಲು ಉಳಿದ ಮೂರು ನಿಗಮಗಳು ಎಚ್‌ಆರ್‌ಎಂಎಸ್‌ಗೆ ಒಳಪಡಬೇಕು, ಆ ಬಳಿಕ ನೌಕರರಿಗೆ ಈ ಸೌಲಭ್ಯ ನೀಡಲು ಸಾಧ್ಯವಾಗಲಿದೆ. ಹೀಗಾಗಿ ನಾವು ಈಗಾಗಲೇ ಈ ಮೂರು ನಿಗಮಗಳ ನೌಕರರನ್ನು HRMSಗೆ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ಫಾರಂಗಳನ್ನು ವಿತರಿಸಿದ್ದೇವೆ ಎಂದು ಮಾಹಿತಿ ನೀಡಿದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...