KSRTC: ಮೇ ಅಂತ್ಯದೊಳಗೆ ಸಿಎಂ ಅವರ ಸಮಯ ನಿಗದಿಪಡಿಸಿ ಸಮಸ್ಯೆ ಇತ್ಯರ್ಥ- ವೇತನ ಹೆಚ್ಚಳದ ಸುಳಿವುಕೊಟ್ಟ ಸಚಿವರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024 ಜನವರಿ 1ರಿಂದ ವೇತನ ಹೆಚ್ಚಳವಾಗಬೇಕಿರುವ ಸಂಬಂಧ ಈ ತಿಂಗಳ ಅಂತ್ಯದೊಳಗೆ ಮುಖ್ಯಮಂತ್ರಿ ಅವರ ಸಮಯ ನಿಗದಿಪಡಿಸಿ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಬಿ.ಎಸ್.ಸುರೇಶ ಮತ್ತು ಸಿ.ಡಿ.ವಿಶ್ವನಾಥ್ ಹಾಗೂ ಕೆಎಸ್ಆರ್ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಭೇಟಿ ಮಾಡಿ ಮೈಸೂರಿನ ಸೊಸೈಟಿಗೆ ಇಲಾಖೆಯ ಕಟ್ಟಡವನ್ನು ಒದಗಿಸಿದ್ದು, ಕಟ್ಟಡದ ಉದ್ಘಾಟನೆಗೆ ಬರಬೇಕು ಎಂದು ಕೇಳಲು ಹೋಗಿದ್ದ ಸಮಯದಲ್ಲಿ ಈ ಭರವಸೆ ನೀಡಿದ್ದಾರೆ ಎಂದು ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.
ಈ ಭೇಟಿ ವೇಳೆ ನೌಕರರ ವೇತನ ಹೆಚ್ಚಳದ ಬಗ್ಗೆ ಸೂಕ್ಷ್ಮವಾಗಿ ಚರ್ಚಿಸಲಾಯಿತು ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ನಾನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಸಮಯ ನಿಗದಿಪಡಿಸಿ ಈ ತಿಂಗಳ ಕೊನೆಯಲ್ಲಿ ನಿಮ್ಮ ವೇತನ ಸಮಸ್ಯೆ ನಿವಾರಿಸುತ್ತೇವೆ ಎಂದು ಹೇಳಿರುವುದಾಗಿ ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.
ವೇತನ ಹೆಚ್ಚಳದ ಬಗ್ಗೆ ಸುಳಿವು: ಸಾರಿಗೆ ನೌಕರರಿಗೂ ಸರಿ ಸಮಾನ ವೇತನ ಕೊಡುತ್ತೇವೆ ಎಂದು ವೇತನ ಅಗ್ರಿಮೆಂಟ್ ಮಾಡದೆ, ಜತೆಗೆ ಕಳೆದ 2020ರ ಜನವರಿ 1ರಿಂದ ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಬಿಡುಗಡೆ ಮಾಡದೆ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನೂ ಈವರೆಗೂ ಅಂದರೆ 17 ತಿಂಗಳು ಕಳೆಯುತ್ತಾ ಬಂದರೂ ಮಾಡದೆ ಬರಿ ಕಾಲ ದೂಡಿಕೊಂಡೆ ಬರುತ್ತಿದೆ ಸರ್ಕಾರ ಎಂಬ ಆರೋಪ ಕೇಳಿ ಬರುತ್ತಿದೆ.
ಈ ನಡುವೆ, ಈವರೆಗೂ ಸಿಎಂ ನೌಕರರ ಸಂಘಟನೆಗಳೊಂದಿಗೆ ಒಂದು ಸಭೆ ಕರೆದಿದ್ದು ಬಿಟ್ಟರೆ ಮತ್ತೆ ವೇತನ ಹೆಚ್ಚಳದ ಬಗ್ಗೆ ಯಾವುದೇ ಚಕಾರವೆತ್ತುತ್ತಿಲ್ಲ. ಜತೆಗೆ ಒಂದು ಬಾರಿ ಸಭೆಯನ್ನು ಮುಂದೂಡಿ ಏ.15-2025ರಂದು ತಮ್ಮ ನಿವಾಸ ಕಾವೇರಿಯಲ್ಲಿ ನಾಮ್ ಕೇ ವಾಸ್ತೆ ಎಂಬಂತೆ ಒಂದು ಸಭೆ ಕರೆದು ಅಷ್ಟಕ್ಕೆ ಸುಮ್ಮನಾಗಿದ್ದಾರೆ ಎಂದು ನೌಕರರು ಅಸಮಾಧಾನಗೊಂಡಿದ್ದಾರೆ.
ಈ ನಡುವೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಈವರೆಗೂ ಕೊಡುವ ಬಗ್ಗೆ ಯಾವುದೇ ಒಂದು ಸ್ಪಷ್ಟ ನಿಲುವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿಲ್ಲ. ಇನ್ನು ಮುಷ್ಕರ ಮಾಡುತ್ತೇವೆ ಎಂದು ಸಂಘಟನೆಗಳು ಮುಂದಾದರೆ ಆಗ 38 ತಿಂಗಳ ಹಿಂಬಾಕಿ ಹಾಗೂ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ವೇತನ ಮಾಡುತ್ತೇವೆ ಎಂಬ ಹೇಳಿಕೆ ನೀಡುವ ಮೂಲಕ ಸಂಘಟನೆಗಳ ಮುಖಂಡರ ದಾರಿಯನ್ನು ಈ ಸರ್ಕಾರ ತಪ್ಪಿಸುತ್ತಲೇ ಬಂದಿದೆ.
ಇನ್ನು ಈ ಬಗ್ಗೆ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಬೇರೆ ಬೇರೆಯಾಗಿಯೇ ಈಗಾಗಲೇ ಹತ್ತಾರು ಮನವಿ ಪತ್ರಗಳನ್ನು ಕೊಟ್ಟು ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸುತ್ತಲೇ ಬಂದಿವೆ. ಆದರೆ ಸರ್ಕಾರ ಮಾತ್ರ ದಪ್ಪ ಚರ್ಮದಂತೆ ನಡೆದುಕೊಳ್ಳುತ್ತಲೆ ಇದೆ ಎಂದು ಅಧಿಕಾರಿಗಳು ಕೂಡ ನೊಂದುಕೊಂಡಿದ್ದಾರೆ.
ಇನ್ನಾದರೂ ಸರ್ಕಾರ ನೌಕರರಿಗೆ ಸರಿ ಸಮಾನ ವೇತನವನ್ನು ವೇತನ ಆಯೋಗದಂತೆ ತಾವು ಕೊಟ್ಟ ಭರವಸೆಯಂತೆ ಮಾಡಿದ್ದೇವೆ ಎಂದು ಘೋಷಣೆ ಮಾಡಿ ಸಾರಿಗೆ ನೌಕರರ ಪ್ರಮುಖ ಬೇಡಿಕೆಯನ್ನು ಈಡೇರಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಬೇಕು. ಎಲ್ಲವನ್ನು ಈ ತಿಂಗಳ ಒಳಗೇ ಮಾಡಬೇಕು ಇಲ್ಲದಿದ್ದರೆ ಮೇ ತಿಂಗಳು ಕಳೆದ ಜೂನ್ ಆರಂಭದಲ್ಲೇ ಸಾರಿಗೆ ನೌಕರರ ಮುಷ್ಕರವನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕೇಂದ್ರ ಕಚೇರಿಯಲ್ಲಿರುವ ಅಧಿಕಾರಿಗಳ ಒಂದು ಸಮೂಹ ಗೌಪ್ಯವಾಗಿ ಮುಷ್ಕರಕ್ಕೆ ಬೆಂಬಲ ನೀಡಲು ಸಮಲೋಚನೆಯಲ್ಲಿ ತೊಡಗಿದೆ ಎಂದು ಬಲ್ಲ ಮೂಲಗಳು ಕಳೆದ ವಾರದ ಹಿಂದೆಯೇ ಖಚಿತಪಡಿಸಿವೆ.
ಹೀಗಾಗಿ ಸರ್ಕಾರ ಮತ್ತು ಸಾರಿಗೆ ಆಡಳಿತ ಮಂಡಳಿಯ ನಡೆಯಿಂದ ಬೇಸತ್ತಿರುವ ಬಹುತೇಕ ಎಲ್ಲ ಅಧಿಕಾರಿಗಳು ಸಮಾಲೋಚನೆ ನಡೆಸುತ್ತಿದ್ದು, ನಾವು ಬಸ್ ನಿಲ್ಲಿಸದಿದ್ದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವುದಿಲ್ಲ ಎಂಬ ಚರ್ಚೆ ಶುರುವಾಗಿದೆ. ಇದರ ಬಿಸಿ ಜೂನ್ ಆರಂಭದಲ್ಲೇ ಸರ್ಕಾರಕ್ಕೆ ತಟ್ಟಲಿದೆ ಎಂದು ಹೇಳಲಾಗುತ್ತಿದ್ದು, ಇದರಿಂದ ಎಚ್ಚೆತ್ತ ಸರ್ಕಾರ ಮೇ ತಿಂಗಳ ಅಂತ್ಯದಲ್ಲೇ ನೌಕರರ ವೇತನ ಸಮಸ್ಯೆ ನಿವಾರಿಸಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...