CrimeNEWSನಮ್ಮಜಿಲ್ಲೆ

KSRTC: ಕೊಳ್ಳೇಗಾಲ ಸಮೀಪ ಬಸ್‌ ಆಟೋ ನಡುವೆ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ, ಮೂವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಆಟೋ ನಡುವೆ ಇಂದು ಮಧ್ಯಾಹ್ನ ತಾಲೂಕಿನ ತನ್ಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಲೂಕಿನ ತನ್ಗೆರೆ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಆಟೋದಲ್ಲಿದ್ದ ಚೆಲುವಿನಹಳ್ಳಿ ಗ್ರಾಮದ ಒಬ್ಬ ಬಾಲಕ ಮತ್ತು ಚಾಲಕ ಸೇರಿ 6 ಜನರಿದ್ದರು. ಅವರಲ್ಲಿ ಓರ್ವ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟರೆ ಆಟೋ ಚಾಲಕ ಸೇರಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನು ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ಆಟೋದಲ್ಲಿದ್ದ ಬಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದೇನೆ ಎನ್ನಲಾಗಿದೆ.

ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಸಾರಿಗೆ ನಿಗಮದ ಚಾಮರಾಜನಗರ ಘಟಕದ ಡಿಎಂ, ಡಿಎಂಇ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಧಾವಿಸಿದ್ದು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿದ್ದಾರೆ.

ಘಟನೆ ವಿವರ: ಸಾರಿಗೆ ಸಂಸ್ಥೆಯ ಚಾಲಕನನ್ನು ಗುತ್ತಿಗೆ ಆಧಾರ ಮೇಲೆ ಅಂದರೆ ದಿನಕ್ಕೆ 1 ಸಾವಿರ ರೂಪಾಯಿ ಕೂಲಿ ಕೊಡುವ ಆಧಾರ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಅಪಘಾತವಾಗಿರುವ ಬಸ್‌ ಇಂದು ಮಧ್ಯಾಹ್ನ 12 ಗಂಟೆಗೆ ಚಾಮರಾಜನಗರದಿಂದ ಕೊಳ್ಳೇಗಾಲ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇನ್ನು ಈ ಗುತ್ತಿಗೆ ಆಧಾರ ಮೇಲೆ ನೇಮಕಗೊಂಡಿರುವ ಚಾಲಕ ನಿತ್ಯ 380 ಕಿಲೋ ಮೀಟರ್‌ ಬಸ್‌ ಓಡಿಸುತ್ತಿದ್ದು, ನೈಟ್‌ಹಾಲ್ಟ್‌ ಬಸ್‌ ಆಗಿರುವುದರಿಂದ ಒಟ್ಟು 760 ಕಿಲೋ ಮೀಟರ್‌ ಬಸ್‌ ಓಡಿಸುತ್ತಿದ್ದರು ಎಂದು ನಿಗಮದ ನೌಕರರು ತಿಳಿಸಿದ್ದಾರೆ.

ಅಲ್ಲದೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಚಾಲಕರಿಗೆ ಯಾವುದೇ ತರಬೇತಿಯನ್ನು ನೀಡದೆ ಏಕಾಏಕಿ ಬಸ್‌ ಚಾಲನೆ ಮಾಡುವುದಕ್ಕೆ ಬಿಡುತ್ತಿರುವುದರಿಂದ ಈ ರೀತಿ ಅಪಘಾತಗಳು ಸಂಭವಿಸುತ್ತಿವೆ ಇದರಿಂದ ಸಂಸ್ಥೆಗೆ ಮತ್ತು ಸಂಸ್ಥೆಯ ಚಾಲಕರಿಗೆ ಕೆಟ್ಟ ಹೆಸರು ಬರುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ