ತುಮಕೂರು: ಡ್ಯೂಟಿ ಮೇಲಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಚಾಲಕ ಕಂ ನಿರ್ವಾಹಕರೊಬ್ಬರ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿ ವಿರುದ್ಧ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್‌ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬುಧವಾರ (ಮಾ.12ರ ರಾತ್ರಿ ಸುಮಾರು 8 ಗಂಟೆಯಲ್ಲಿ ಮಧುಗಿರಿ ಶಿರಾ ರಸ್ತೆಯಲ್ಲಿ ದೊಡ್ಡೆರಿ ಹತ್ತಿರ ಶಿರಾ ಘಟಕದ ನಿರ್ವಾಹಕ ಮಲ್ಲಿಕಾರ್ಜುನ ಎಂಬುವರ ಮೇಲೆ ಬೈಕ್‌ಸವಾರ ದೊಡ್ಡೇರಿಯ ಗುರು ಎಂಬಾತನೆ ಹಲ್ಲೆ ಮಾಡಿದ ಆರೋಪಿ.
ಸದ್ಯ ಕಂಡಕ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಹಲ್ಲೆ ಮಾಡಿದ್ದರಿಂದ ಮೂಗು, ತುಟಿ ಹಾಗೂ ಕಣ್ಣಿನ ಮೇಲೆ ಬಲವಾದ ಪೆಟ್ಟಾಗಿದೆ ಎಂದು ತಿಳಿಸಿದ್ದಾರೆ.
ಘಟನೆ ವಿವರ: ತುಮಕೂರು ವಿಭಾಗ ಶಿರಾ ಡಿಪೋದಲ್ಲಿ ಕಂಡಕ್ಟರ್ ಮಲ್ಲಿಕಾರ್ಜುನ (ನಂ-358) ಚಾಲಕ ಕಂ ನಿರ್ವಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದರಂತೆ ಮಾ.12 ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಶಿರಾ ಬಸ್ ನಿಲ್ದಾಣಕ್ಕೆ ಒಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಮಾರ್ಗದಂತೆ ಕರ್ತವ್ಯ ನಿರ್ವಹಿಸುತ್ತಿದ್ದರು.
ಅದರಂತೆ ಸಂಜೆ 6.45ರಲ್ಲಿ ತುಮಕೂರಿನಿಂದ ಮದೂಡಿಗೆ ಹೋಗಲು ಪ್ರಯಾಣಿಕರನ್ನು ಹತ್ತಿಸಿಕೊಂಡು ತೋವಿನಕೆರೆ ಮಾರ್ಗವಾಗಿ ದೊಡ್ಡರಿಯ ಬಸ್ ನಿಲ್ದಾಣಕ್ಕೆ ಬಂದು ರಾತ್ರಿ 8 ಗಂಟೆ ಸಮಯದಲ್ಲಿ ಬಸ್ಸನ್ನು ನಿಲಿಸಲು ಹೋದಾಗ ಮುಂದೆ ರಸ್ತೆಗೆ ಅಡ್ಡಲಾಗಿ ಆರೋಪಿ ಗುರು ಬೈಕನ್ನು ನಿಲಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ.
ಈ ವೇಳೆ ಕಂಡಕ್ಟರ್ ಬೈಕನ್ನು ಸೈಡಿಗೆ ಹಾಕಪ್ಪ ಎಂದು ಹೇಳಿದಾಗ ಆತ ಅವಾಚ್ಯ ಪದಗಳಿಂದ ಬೈದು ನಿಮ್ಮದು ಜಾಸ್ತಿಯಾಯಿತು ಎಂದು ಕೂಗಾಡುತ್ತಿದ್ದ. ವೇಳೆ ಏಕೆ ಬೈಯ್ಯುತ್ತೀಯಾ ಎಂದು ನಿರ್ವಾಹಕ ಬಸ್ಸಿನಿಂದ ಇಳಿದು ಹೋಗಿ ಕೇಳಿದಾಗ ಕರ್ತವ್ಯದ ಮೇಲೆ ಇದ್ದ ಆತನ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.
ಅಲ್ಲದೆ ಏಕಾ-ಏಕಿ ನಿರ್ವಾಕರ ಮೇ:ಎ ನನ್ನ ಮಗನೆ ನನ್ನ ತಂಟೆಗೆ ಬಂದರೆ ನಿನ್ನನ್ನು ಬಿಡುವುದಿಲ್ಲವೆಂದು ಬೆದರಿಕೆ ಹಾಕಿ ಕೈಗಳಿಂದ ಮುಖ, ಬಲಗಣ್ಣಿಗೆ, ಮೂಗಿಗೆ, ಬಲವಾಗಿ ಹೊಡೆದು ಹಲೆ ಮಾಡಿದ್ದಾನೆ. ಈ ವೇಳೆ ಬಂದ ಸಾರ್ವಜನಿಕರು ಬಿಡಿಸಿದ್ದಾರೆ.
ಬಳಿಕ ಕಂಡಕ್ಟರ್‌ದೊಡ್ಡರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಚಿಕಿತ್ಸೆ ಪಡೆದು ಬಳಿಕ ಠಾಣೆಗೆ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿ ನನಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಕೈಗಳಿಂದ ಹೊಡೆದು ಹಲೆ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ ದೊಡ್ಡರಿಯ ಗುರು ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದಾರೆ.
ಕಂಡಕ್ಟರ್‌ಮಲ್ಲಿಕಾರ್ಜುನ ನೀಡಿದ ದೂರಿನ ಮೇರೆಗೆ ಆರೋಪಿ ಗುರು ವಿರುದ್ಧ ಭಾರತೀಯ ನ್ಯಾಯಸಂಹಿತೆ 2023 (U/s-115 (2), 126 (2), 132, 351(2) ಹಾಗೂ 352 ರಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇನ್ನು ಕಂಡಕ್ಟರ್‌ಮಲ್ಲಿಕಾರ್ಜುನ ಅವರ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಹಲ್ಲೆ ಕೋರ ಆರೋಪಿಗಳನ್ನು ಬಂಧಿಸಬೇಕೆಂದು ವಿಭಾಗೀಯ ಸಂಚಾಲನ ಅಧಿಕಾರಿಗಳು ಮತ್ತು ಶಿರಾ ಘಟಕದ ವ್ಯವಸ್ಥಾಪಕರು, ವಿಭಾಗೀಯ ಭದ್ರತಾ ಅಧಿಕಾರಿಗಳು ಮತ್ತ ಶಿರಾ ಘಟಕದ ನೌಕರರ ಮುಖಂಡರು ಪೊಲೀಸ್‌ಠಾಣೆಗೆ ಹೋಗಿ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ ಬಳಿಕ ನಿರ್ವಾಹಕರನ್ನು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...