CrimeNEWSನಮ್ಮಜಿಲ್ಲೆ

4 ತಿಂಗಳ ಹಿಂದೆ ಬಸ್‌ನಲ್ಲಿ ಕಳವುಮಾಡಿದ್ದ ಕಳ್ಳರ ಹೆಡೆಮುರಿ ಕಟ್ಟಲು ಧೈರ್ಯ ತೋರಿದ KSRTC ಮಂಗಳೂರು ಘಟಕ-2 ಕಂಡಕ್ಟರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಒಬ್ಬರ ಬ್ಯಾಗಿನಲ್ಲಿದ್ದ ಚಿನ್ನ ಹಾಗೂ ನಗದು ಕಳವು ಮಾಡಿದ್ದ ಆರೋಪಿಗಳು ಮತ್ತೆ ಅದೇ ಬಸ್‌ನಲ್ಲಿ ನಾಲ್ಕು ತಿಂಗಳ ಬಳಿಕ ಬಂದಾಗ ನಿರ್ವಾಹಕ ಅವರ ಗುರುತು ಪತ್ತೆ ಮಾಡಿ ನಿಗಮದ ಅಧಿಕಾರಿಗಳ ಮೂಲಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದೇ ನ.12ರಂದು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಖದೀಮರನ್ನು ಪೊಲೀಸರಿಗೆ ಒಪ್ಪಿಸಿದ ನಿರ್ವಾಹಕರು ಬಸ್‌ನಲ್ಲಿ ಕಳ್ಳತನಕ್ಕೆ ಇಳಿದಿದ್ದ ಪೋಕರಿಗಳ ಹೆಡೆಮುರಿಕಟ್ಟುವಲ್ಲಿ ಧೈರ್ಯ ತೋರಿಸಿದ್ದಾರೆ.

ಘಟನೆ :ಜು. 10ರಂದು ಮಂಗಳೂರು 2ನೇ ಘಟಕದ ಬಸ್‌ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿರುವಾಗ ಉಪ್ಪಿನಂಗಡಿಯ ಗಡಿಯಾರದ ಬಳಿ ಬಸ್‌ ನಿಲ್ಲಿಸಿದಾಗ ಇಬ್ಬರು ಇಳಿದು ಹೋಗಿದ್ದರು. ಸುಮಾರು ನಿಮಿಷಗಳ ಕಾಲ ಅವರಿಗಾಗಿ ಕಾದರೂ ಅವರ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಘಟಕದ ಅಧಿಕಾರಿಗಳಿಗೆ ವಿಷಯ ಮುಟ್ಟಿಸಲಾಯಿತು. ಆ ಅಧಿಕಾರಿಗಳ ಸೂಚನೆಯಂತೆ ಬಳಿಕ ಬಸ್‌ ಹೊರಟಿತು.

ಸ್ವಲ್ಪ ದೂರ ಹೋದ ನಂತರ ಮಹಿಳೆ ಒಬ್ಬರ ಬ್ಯಾಗ್‌ನಲ್ಲಿ ಇದ್ದ ಚಿನ್ನಾಭರಣ ಮತ್ತು ನಗದು ಕಳುವಾಗಿರುವುದು ತಿಳಿಯಿತು. ಹೀಗಾಗಿ ಹಣ ಮತ್ತು ಒಡವೆ ಕಳವಾಗಿದ್ದರ ಬಗ್ಗೆ ಪುತ್ತೂರು ಹಾಗೂ ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು.

ನ. 12ರಂದು ರಾತ್ರಿ 9.45ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಮಂಗಳೂರಿಗೆ ತೆರಳಲು ಫ್ಲಾಟ್‌ ಫಾರಂನಲ್ಲಿ ಪ್ರಯಾಣಿಕರು ಹತ್ತಿದ್ದರು. ನಿರ್ವಾಹಕ ಅಶೋಕ್‌ ಜಾಧವ್‌ ಅವರು ಟ್ರಿಪ್‌ ಶೀಟ್‌ ಪರಿಶೀಲಿಸುತ್ತಿರುವಾಗ ಇಬ್ಬರು ಮೊದಲೇ ಬಂದು ಕುಳಿತಿದ್ದರು.

ಅನುಮಾನಗೊಂಡ ನಿರ್ವಾಹಕ, ಈ ಹಿಂದೆ ಅವರು ಬಂದಿದ್ದಾಗ ಕಳವಾದ ಬಗ್ಗೆ ನೆನಪು ಮಾಡಿಕೊಂಡರು. ಕೂಡಲೇ ಘಟಕಕ್ಕೆ ಮಾಹಿತಿ ನೀಡಿದ್ದರು. ಘಟಕದ ಸೂಚನೆಯಂತೆ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿದ್ದರು. ಆ ಇಬ್ಬರು ಪ್ರಯಾಣಿಕರನ್ನು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ.

ನಿರ್ವಾಹಕ ಅಶೋಕ್‌ ಜಾಧವ್‌ ಅವರ ಈ ಸಮಯಪ್ರಜ್ಞೆ ಕಳೆದ 4 ತಿಂಗಳ ಹಿಂದೆ ಕಳವಾಗಿದ್ದರ ಬಗ್ಗೆ ಮಾಹಿತಿ ಸಿಕ್ಕಿದಂತಾಯಿತು. ಹೀಗಾಗಿ ಸಮಯಪ್ರಜ್ಞೆ ಮೆರೆದ ಬಸ್‌ ನಿರ್ವಾಹಕರ ಕಾರ್ಯ ತತ್ಪರತೆಯನ್ನು ಕೆಎಸ್‌ಆರ್‌ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಶ್ಲಾಘಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...