NEWSನಮ್ಮರಾಜ್ಯ

KSRTC: ಉಚಿತವಾಗಿ ಬಸ್‌ಪಾಸ್‌ಪಡೆದ ಕಟ್ಟಡ ಕಾರ್ಮಿಕರು 45 ಕಿಮೀ ವರಗಷ್ಟೆ ಪ್ರಯಾಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಕಟ್ಟಡ ಕಾರ್ಮಿಕರಿಗೆ ಬಸ್‌ ಪಾಸ್ ವಿತರಿಸಲು ಮತ್ತೆ ಸರ್ಕಾರ ಚಾಲನೆ ನೀಡಿದ್ದು, ಈ ಬಗ್ಗೆ ಕಾರ್ಮಿಕರಿಗೆ ತಿಳಿವಳಿಕೆ ಮೂಡಿಸುವಂತೆ ನೌಕರರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್‌ಗಳನ್ನು ಕಾರ್ಮಿಕ ಇಲಾಖೆಯು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಗೆ ವಿತರಿಸಲಾಗುತ್ತದೆ. ಕಟ್ಟಡ ಕಾರ್ಮಿಕರು ಈ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನುಈ ಮಂಡಳಿಯಲ್ಲಿ ಈಗಾಗಲೇ ನೋಂದಾಯಿಸಿರುವ ಫಲಾನುಭವಿಗಳು ತಮ್ಮ ವಾಸಸ್ಥಳಕ್ಕೆ ಹತ್ತಿರದಲ್ಲಿರುವ ಕರ್ನಾಟಕ ಒನ್/ಗ್ರಾಮ ಸೇವಾ ಒನ್‌ ಸೆಂಟರ್‌ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಉಚಿತವಾಗಿ ಪಾಸು ಪಡೆದುಕೊಳ್ಳಬಹುದಾಗಿದೆ.

ಈ ಉಚಿತ ಪಾಸುದಾರರು ಪಾಸು ಪಡೆದ ಸ್ಥಳದಿಂದ 45 ಕಿ.ಮೀ ವ್ಯಾಪ್ತಿಯಲ್ಲಿ ನಿಗಮಗಳ ನಗರ, ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ ಈ ಪಾಸುಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.ಈ ಬಸ್ ಪಾಸ್‌ ಪಡೆಯಲು ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆಯ ಉಚಿತ ಸಹಾಯವಾಣಿ ಸಂ: 155214 ನ್ನು ಸಂಪರ್ಕಿಸಲು ತಿಳಿಸಿದ್ದಾರೆ.

ಇನ್ನು ಈ ಬಸ್‌ಪಾಸ್‌ ಪಡೆದ ಕಾರ್ಮಿಕರು ತಾವು ವಾಸಿಸುವ ಸ್ಥಳದಿಂದ 45 ಕಿ.ಮೀ. ವರೆಗೆ ಮಾತ್ರ ಉಚಿತವಾಗಿ ಪ್ರಯಾಣಿಸಬೇಕು. ತದನಂತರ ಟಿಕೆಟ್ ಪಡೆದು ಪ್ರಯಾಣಿಸಬೇಕು ಎಂದು ವಿವರಿಸಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ