NEWSದೇಶ-ವಿದೇಶನಮ್ಮರಾಜ್ಯ

KSRTC: ಮತ್ತೆ 16 ರಾಷ್ಟ್ರ ಪ್ರಶಸ್ತಿಗಳ ಮುಡಿಗೇರಿಸಿಕೊಂಡ ನಿಗಮ : ಸೆಪ್ಟೆಂಬರ್ 21ರಂದು ದೆಹಲಿಯಲ್ಲಿ ಪ್ರದಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಯನ್ನು ಮೂಡಿಗೇರಿಸಿಕೊಳ್ಳುತ್ತಲೇ ಇದೆ. ಅದರಂತೆ ಇದೀಗ ಸಂಸ್ಥೆಗೆ ರಾಷ್ಟ್ರ ಮಟ್ಟದ 8 ವೀಡಿಯಾ (ViDEA), 5 ಎಂಕ್ಯೂಬ್(mCUBE) ಮತ್ತು 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಹಾಗೂ 1 ಸ್ಕೋಚ್ ಪ್ರಶಸ್ತಿಗಳು ಲಭಿಸಿದೆ.

ನಿಗಮಕ್ಕೆ ವೀಡಿಯಾ ಪ್ರಶಸ್ತಿ ತಂದುಕೊಂಡ ವಿಭಾಗಗಳು: 1) ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. 2) ಅಶ್ವಮೇಧ ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.

3) ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. 4) ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.

5)ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. 6)ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.

7) ಅಶ್ವಮೇಧ ಬ್ರಾಂಡಿಂಗ್ ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ – ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್. 8)ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ – ಕೆಎಸ್ಆರ್‌ಟಿಸಿ ಸಂಸ್ಥೆ ಪಡೆದುಕೊಂಡಿದೆ.

ಅದೇ ರೀತಿ ಎಂಕ್ಯೂಬ್‌ ಪ್ರಶಸ್ತಿಗಳು ಈ ವಿಭಾಗಗಳಲ್ಲಿ ಲಭಿಸಿದೆ: 1)ಬ್ರಾಂಡಿಂಗ್‌ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್. 2)ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್). 3)ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್. 4)ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್.

5)ಬ್ರಾಂಡಿಂಗ್ ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್. 6)ಇನ್ನು ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮಗಳಿಗಾಗಿ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕೋಚ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ViDEA ಪ್ರಶಸ್ತಿ ಮತ್ತು mCUBE ಪ್ರಶಸ್ತಿಗಳನ್ನು ಗುರುಗಾಂವ್​ನಲ್ಲಿ ಪ್ರದಾನ ಮಾಡಲಾಗಿದೆ. ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್‌ಲೈನ್‌ನಲ್ಲಿ ಈಗಾಗಲೇ ನೀಡಲಾಗಿದೆ. ಇನ್ನು ಸ್ಕೋಚ್ ಪ್ರಶಸ್ತಿ ಸಮಾರಂಭವು ಇದೇ 2024ರ ಸೆಪ್ಟೆಂಬರ್ 21ರಂದು ದೆಹಲಿಯಲ್ಲಿ ನಡೆಯಲಿದ್ದು ಈ ಸಮಾರಂಭದಲ್ಲಿ ಉಳಿದ ಎಲ್ಲ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ ಎಂದು ಸಂಸ್ಥೆಯ ಅಧಿಕಾರಗಳು ತಿಳಿಸಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!