NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಡಿಎ ಮರ್ಜ್‌ಮಾಡಿ ಶೇ.25 ರಷ್ಟು ವೇತನ ಹೆಚ್ಚಳ ಮಾಡಲೇ ಬೇಕು : ಜಂಟಿ ಕ್ರಿಯಾ ಸಮಿತಿ ಪಟ್ಟು

ಇಂದು ನೌಕರರ ವೇತನ ಪರಿಷ್ಕರಣೆ ಕುರಿತ ಸಭೆ l ವೇತನ ಒಪ್ಪಂದ ವಿಳಂಬ ಮಾಡದೆ ಶೀಘ್ರ ಇತ್ಯರ್ಥಕ್ಕೆ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2019 ಡಿಸೆಂಬರ್‌ 31ರ ಮೂಲ ವೇತನಕ್ಕೆ ಬಿಡಿಎ ಮರ್ಜ್ (Merge) ಮಾಡಿ ಶೇ.25 ರಷ್ಟು ವೇತನ ಹೆಚ್ಚಳ ಮಾಡಬೇಕು ಮತ್ತು ವಾರ್ಷಿಕ ವೇತನ ಬಡ್ತಿ, ಪರಿಷ್ಕೃತ ಮೂಲ ವೇತನದ ಶೇ.3 ರಷ್ಟು ನಿಗದಿಪಡಿಸಿ ವೇತನ ಶ್ರೇಣಿ ರಚಿಸಬೇಕು ಎಂಬ ಬೇಡಿಕೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸರ್ಕಾರದ ಮುಂದಿಟ್ಟಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

ಇಂದು ಅಪರಾಹ್ನ 3 ಗಂಟೆಗೆ ನಿಗಮದ ಕೇಂದ್ರ ಕಚೇರಿ ಸಭಾಂಗಣದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ BMTC, NWKRTC, KKRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳೊಂದಿಗೆ ಆಯೋಜಿಸಿದ್ದ ನೌಕರರ ವೇತನ ಪರಿಷ್ಕರಣೆ ಕುರಿತ ಸಭೆಯಲ್ಲಿ ಈ ಬೇಡಿಕೆಯೂ ಸೇರಿದಂತೆ 16 ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲಾಯಿತು ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಸಭೆಯಲ್ಲಿ ಕೆ.ಎಸ್.ಆರ್.ಟಿ.ಸಿ ಸ್ಟಾಫ್‌ & ವರ್ಕರ್ಸ್‌ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿ.ಐ.ಟಿ.ಯು), ಕೆ.ಎಸ್.ಆರ್.ಟಿ.ಸಿ. & ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆ.ಎಸ್.ಆರ್.ಟಿ.ಸಿ ಪ.ಜಾ ಮತ್ತು ಪ.ಪಂ ನೌಕರರ ಸಂಘ, ಕೆ.ರಾ.ರ.ಸಾ ಸಂಸ್ಥೆ ಪ.ಜಾ/ಪ.ಪಂಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಇನ್ನು ಜಂಟಿ ಕ್ರಿಯಾ ಸಮಿತಿ ಪರವಾಗಿ ಎಚ್.ವಿ. ಅನಂತಸುಬ್ಬರಾವ್, ಗಂಗಾಧರಯ್ಯ, ಎಚ್‌.ಡಿ. ರೇವಪ್ಪ, ಎಚ್.ಎಸ್. ಮಂಜುನಾಥ್, ಜಯದೇವರಾಜೇ ಅರಸು, ವಿಜಯಕುಮಾರ್, ವೆಂಕಟರವಣಪ್ಪ, ಡಾ.ಮೋಹನ್‌ರಾಜ್‌ ಮಾತನಾಡಿ, ಒಕ್ಕೊರಲಿನಿಂದ ವೇತನ ಪರಿಷ್ಕರಣೆ ಒಪ್ಪಂದ 01.01.2020 ರಿಂದಲೇ ಆಗಬೇಕು, ಸಂಪೂರ್ಣವಾಗಿ ಬಾಕಿ ಹಣ ಪಾವತಿಸಬೇಕು. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲವೆಂಬ ಅಂಶವನ್ನು ಸ್ಪಷ್ಟವಾಗಿ ತಿಳಿಸಿದ್ದು, ಇತರೆ ಬೇಡಿಕೆಗಳನ್ನು ಸಹ ಗಂಭೀರವಾಗಿ ಚರ್ಚಿಸಿ, ಇತ್ಯರ್ಥಪಡಿಸಬೇಕು ಎಂದು ಒತ್ತಾಯಿರುವುದಾಗಿ ತಿಳಿಸಿದ್ದಾರೆ.

ನಾಲ್ಕೂ ನಿಗಮಗಳ ಆಡಳಿತ ವರ್ಗಕ್ಕೆ ನಮ್ಮ 16 ಅಂಶಗಳನ್ನು ಮನವರಿಕೆ ಮಾಡಿಕೊಟ್ಟಿದ್ದು ಅಲ್ಲದೆ ವೇತನ ಒಪ್ಪಂದವನ್ನು ಇನ್ನು ವಿಳಂಬ ಮಾಡದೆ ಇತ್ಯರ್ಥಪಡಿಸಬೇಕೆಂದು ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.

ಇನ್ನು ಸಭಾಧ್ಯಕ್ಷತೆ ವಹಿಸಿದ್ದ ಕೆಎಸ್ಆರ್ಟಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರು ಸಾರಿಗೆ ನಿಗಮಗಳ ಹಣಕಾಸು ಪರಿಸ್ಥಿತಿ ಹಾಗೂ ಸರ್ಕಾರದ ವತಿಯಿಂದ ನಿಗಮಗಳಿಗೆ ನೀಡಲಾದ ನೆರವು ಇತ್ಯಾದಿ ವಿಷಯಗಳ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದ ಅವರು ತಾವು ಜಂಟಿ ಕ್ರಿಯಾ ಸಮಿತಿ ಅಲ್ಲದೆ ಇನ್ನಿತರ ಕಾರ್ಮಿಕ ಸಂಘಟನೆಗಳ ಜತೆ ಚರ್ಚಿಸಿ ಅವರ ಅಭಿಪ್ರಾಯವನ್ನು ಪಡೆದುಕೊಂಡು ಸರ್ಕಾರದ ಜತೆ ಚರ್ಚಿಸಿ ಮುಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳೋಣ ಎಂದು ಹೇಳಿದರು.

ಫಾರಂ-4, ಇನ್ಸೆಂಟೀವ್, ಬಾಟಾ ಭತ್ಯೆ ಮತ್ತಿತರ ಭತ್ಯೆಗಳ ಬಗ್ಗೆ ನಮ್ಮ ನಿರ್ದೇಶಕ ಮಂಡಳಿಯಲ್ಲಿ ಅನುಮೋದನೆ ಪಡೆದು ಜಾರಿಗೊಳಿಸುವುದಾಗಿ ತಿಳಿಸಿ ಅದಷ್ಟು ಬೇಗ ಈ ಬೇಡಿಕೆಗಳನ್ನು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿರುವುದಾಗಿ ಸಮಿತಿ ಪದಾಧಿಕಾರಿಗಳು ವಿವರಿಸಿದ್ದಾರೆ.

ಇನ್ನು ಮುಂದಿನ ಸಭೆಯಲ್ಲಿ ಬೇಡಿಕೆಗಳು ಸಕಾರಾತ್ಮಕವಾಗಿ ಇತ್ಯರ್ಥವಾಗಬಹುದೆಂಬ ಆಶಾಭಾವನೆ ನಮ್ಮದು. ಹೀಗಾಗಿ ಕಾರ್ಮಿಕ ಬಂಧುಗಳು ಈ ಸಂದರ್ಭದಲ್ಲಿ ಯಾವುದೇ ವದಂತಿಗಳಿಗೆ, ಉಹಾಪೋಹಗಳಿಗೆ, ಗಾಳಿ ಸುದ್ದಿಗಳಿಗೆ ಕಿವಿಗೊಡದೆ ತಾಳ್ಮೆ ಹಾಗೂ ಸಂಯಮದಿಂದ ಸಹಕರಿಸಬೇಕು ಎಂದು ಜಂಟಿ ಕ್ರಿಯಾ ಸಮಿತಿ ಪರವಾಗಿ ತಮ್ಮನ್ನು ಕೋರುತ್ತೇವೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

ಸಭೆಯಲ್ಲಿ ಉಳಿದ 3 ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ ನಿರ್ದೇಶಕರು (ಭಜಾ) ಹಾಗೂ ಇಲಾಖಾ ಮುಖ್ಯಸ್ಥರು ಭಾಗವಹಿಸಿದ್ದರು. ಜಂಟಿ ಕ್ರಿಯಾ ಸಮಿತಿ ವತಿಯಿಂದ ಎಲ್ಲ 6 ಸಂಘಟನೆಗಳ ಪರವಾಗಿ ಕಾರ್ಮಿಕ ಮುಖಂಡರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ