NEWSನಮ್ಮಜಿಲ್ಲೆ

KKRTC: ರಾಯಚೂರು ಬಸ್‌ ನಿಲ್ದಾಣದೊಳಗೆ ಖಾಸಗಿ ವಾಹನಗಳ ದರ್ಬಾರ್‌ – ಕಂಡು ಕಾಣದಂತೆ ವರ್ತಿಸುತ್ತಿರುವ ಅಧಿಕಾರಿಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಇಲ್ಲಿನ ಸಾರಿಗೆ ಬಸ್ ನಿಲ್ದಾಣದ ಒಳಗೇ ಖಾಸಗಿ ವಾಹನಗಳ ದರ್ಬಾರ್ ಜೋರಾಗಿದ್ದು, ಪ್ರಯಾಣಿಕರನ್ನು ಬಸ್‌ನಿಲ್ದಾಣದೊಳಕ್ಕೇ ಬಂದು ರಾಜಾರೋಷವಾಗಿ ಹತ್ತಿಸಿಕೊಂಡು ಹೋಗುತ್ತಿದ್ದಾರೆ.

ಇತಿಹಾಸದಲ್ಲೇ ಈ ರೀತಿ ಸಾರಿಗೆ ಬಸ್‌ ನಿಲ್ದಾಣಕ್ಕೆ ಖಾಸಗಿ ವಾಹನಗಳು ಬರುತ್ತಿರುವುದು ಇದೇ ಮೊದಲು. ಹೀಗಿದ್ದರೂ ಅಧಿಕಾರಿಗಳು ಖಾಸಗಿ ವಾಹನಗಳನ್ನು ತಡೆಯುವಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ.

ಹೌದು! ಇದು ಅಧಿಕಾರಗಳ ನಿರ್ಲಕ್ಷ್ಯವಾಗಿದ್ದು, ಹೇಳುವವರು ಕೇಳುವವರು ಇಲ್ಲದಂತಾಗಿದೆ. ಅಧಿಕಾರಿಗಳ ಈ ನಡೆಯಿಂದ ಖಾಸಗಿಯವರಿಗೆ ಹಬ್ಬವಾಗಿದ್ದು ಸಾರಿಗೆ ಬಸ್‌ಗಳ ಆದಾಯಕ್ಕೆ  ಕತ್ತರಿ ಬೀಳುತ್ತಿದೆ.

ಇನ್ನು ಅಧಿಕಾರಿಗಳು ನಿರ್ವಾಹಕರಿಗೆ ಆದಾಯವನ್ನು ಹೆಚ್ಚಿಗೆ ತರಬೇಕು ಎಂದು ಉತ್ತರನ ಪೌರುಷ ಒಲೆಮುಂದೆ ಎಂಬಂತೆ ಕಿರಿ ಕಿರಿ ಮಾಡುತ್ತಿರುತ್ತಾರೆ. ಆದರೆ ಈ ರೀತಿ ಖಾಸಗಿ ವಾಹನಗಳು ಬರುತ್ತಿದ್ದರು ಅವುಗಳನ್ನು ತಡೆಯುವುದಕ್ಕೆ ಮಾತ್ರ ಮುಂದಾಗುತ್ತಿಲ್ಲ.

ಸಾರಿಗೆ ಸಂಸ್ಥೆಯ ನಿರ್ವಾಹಕರು ಇದರಿಂದ ಬೇಸತ್ತಿದ್ದಾರೆ. ಅಧಿಕಾರಿಗಳು ಆದಾಯ ಹೆಚ್ಚಿಗೆ ತರುವಂತೆ ಕಿರುಕುಳ ನೀಡುತ್ತಿದ್ದರೆ. ಇತ್ತ ಪ್ರಯಾಣಿಕರು ಇಲ್ಲದೆ ಖಾಲಿ ಬಸ್‌ಗಳನ್ನೇ ಓಡಿಸುವ ಪರಿಸ್ಥಿತಿ ಬಂದಿದೆ.

ಇದಕ್ಕೆಲ್ಲ ಕಾರಣ ಅಧಿಕಾರಿಗಳ ಜಾಣಮೌನವಾಗಿದೆ. ನಿಲ್ದಾಣದೊಳಕ್ಕೆ ಬೈಕ್‌ ಬಂದಿತು ಎಂದು ನಿಲ್ದಾಣದ ಹೊಣೆ ಹೊತ್ತಿದ್ದ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದು ನಮ್ಮ ಮುಂದೆಯೇ ಇದೆ.

ಆದರೆ, ಇಲ್ಲಿ ಖಾಸಗಿ ವಾಹನಗಳು ನಿಲ್ದಾಣಕ್ಕೇ ಬಂದು ಜನರನ್ನು ಹತ್ತಿಸಿಕೊಂಡು ಹೋಗುತ್ತಿರುವುದಕ್ಕೆ ಏನು ಕ್ರಮ ಜರುಗಿಸುತ್ತಾರೆ ಎಂದು ನೌಕರರು ಪ್ರಶ್ನಿಸುತ್ತಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...